ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ

ಶ್ರೀ ಮನ್ಸುಖ್ ಮಾಂಡವೀಯ ಅವರು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಉಸ್ತುವಾರಿ ವಹಿಸಿಕೊಂಡರು

Posted On: 11 JUN 2024 4:36PM by PIB Bengaluru

ಶ್ರೀ ಮನ್ಸುಖ್ ಮಾಂಡವೀಯ ಅವರು ಇಂದು ಶಾಸ್ತ್ರಿ ಭವನದಲ್ಲಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಅವರು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆಯನ್ನೂ ಸಹ ಹೊಂದಿದ್ದಾರೆ. ಕ್ರೀಡಾ ಇಲಾಖೆಯ ಕಾರ್ಯದರ್ಶಿ ಮತ್ತು ಯುವ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು. ಯುವ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ಶ್ರೀಮತಿ ರಕ್ಷಾ ನಿಖಿಲ್ ಖಾಡ್ಸೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

ಸಚಿವಾಲಯದ ಯೋಜನೆಗಳು ಮತ್ತು ಉಪಕ್ರಮಗಳ ಬಗ್ಗೆ ಸಚಿವಾಲಯದ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರುಗಳಿಗೆ ವಿವರಿಸಿದರು. ಈ ಹಿಂದೆ ಡಾ. ಮನ್ಸುಖ್ ಮಾಂಡವೀಯ ಅವರು, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

*****



(Release ID: 2024368) Visitor Counter : 24