ಅತಿಸಣ್ಣ, ಸಣ್ಣ, ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳ ಸಚಿವಾಲಯ

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವರಾದ ಕೇಂದ್ರ ಸಚಿವ ಶ್ರೀ ಜಿತನ್ ರಾಮ್ ಮಾಂಝಿ ಮತ್ತು ರಾಜ್ಯ ಸಚಿವೆ  ಶೋಭಾ ಕರಂದ್ಲಾಜೆ ಅವರು ಅಧಿಕಾರ  ವಹಿಸಿಕೊಂಡರು

Posted On: 11 JUN 2024 2:38PM by PIB Bengaluru

ಕೇಂದ್ರ ಸಚಿವ ಶ್ರೀ ಜಿತನ್ ರಾಮ್ ಮಾಂಝಿ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವರಾಗಿ ಅಧಿಕಾರ ವಹಿಸಿಕೊಂಡರು. 2014 ಮತ್ತು 2015 ರ ನಡುವೆ ಅವರು ಬಿಹಾರದ ಮುಖ್ಯಮಂತ್ರಿಯಾಗಿದ್ದರು.

 

ಶೋಭಾ ಕರಂದ್ಲಾಜೆ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದೆ ಅವರು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾಗಿ ಮತ್ತು ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಾರ್ಯದರ್ಶಿ (MSME) ಮತ್ತು ಸಚಿವಾಲಯದ ಎಲ್ಲಾ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರನ್ನು ಸ್ವಾಗತಿಸಿದರು. 

 


 

ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಶ್ರೀ ಜಿತನ್ ರಾಮ್ ಮಾಂಝಿ ಅವರು, 2047ರ ವಿಷನ್‌ನಲ್ಲಿ ತಮ್ಮನ್ನು ಸೇರಿಸಿಕೊಂಡಿದ್ದಕ್ಕಾಗಿ ಮತ್ತು ಎಂಎಸ್ಎಮ್ಇ (MSME)ಗಳನ್ನು ಕೇಂದ್ರಬಿಂದುವನ್ನಾಗಿ ಒಳಗೊಂಡಿರುವ ಆತ್ಮನಿರ್ಭರ್ ಭಾರತ್‌ನ ಪಯಣದ ಭಾಗವಾಗಿಸಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದರು.

ಎಂಎಸ್‌ಎಂಇಗಳನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಜಿಡಿಪಿಯಲ್ಲಿ ಅದರ ಪಾಲನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದರು.

ಎಂಎಸ್‌ಎಂಇಗಳ ಸಬಲೀಕರಣಕ್ಕಾಗಿ ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಪ್ರಯತ್ನ ಬಿಡಬೇಡಿ ಎಂದು ಉಭಯ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

*****



(Release ID: 2024391) Visitor Counter : 20