ಪ್ರವಾಸೋದ್ಯಮ ಸಚಿವಾಲಯ
azadi ka amrit mahotsav

ಪ್ರವಾಸೋದ್ಯಮ ಸಚಿವಾಲಯದ ಉಸ್ತುವಾರಿ ವಹಿಸಿಕೊಂಡ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ 

प्रविष्टि तिथि: 11 JUN 2024 2:49PM by PIB Bengaluru

ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವರಾಗಿ ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವಾಲಯದ ಕಾರ್ಯದರ್ಶಿ ಶ್ರೀಮತಿ ವಿ ವಿದ್ಯಾವತಿ ಅವರು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳೊಂದಿಗೆ ಸಚಿವರನ್ನು ಸ್ವಾಗತಿಸಿದರು.

 

ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪ್ರವಾಸೋದ್ಯಮ ಸಚಿವಾಲಯದ ಹಿರಿಯ ಅಧಿಕಾರಿಗಳು ಸಚಿವಾಲಯದ ಯೋಜನೆಗಳು ಮತ್ತು ಉಪಕ್ರಮಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಶೇಖಾವತ್ ಅವರು, ಭಾರತವನ್ನು ಜಾಗತಿಕ ಮಟ್ಟದಲ್ಲಿ ತೋರಿಸುವ ಮತ್ತು ಇಡೀ ಜಗತ್ತಿನ ಜನರನ್ನು ಭಾರತಕ್ಕೆ ಆಹ್ವಾನಿಸುವ ಜವಾಬ್ದಾರಿಯನ್ನು ನನಗೆ ನೀಡಿರುವುದಕ್ಕೆ ಕೃತಜ್ಞತೆ ಹೇಳುತ್ತೇನೆ ಎಂದರು. ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದೇಶದ ಪ್ರವಾಸೋದ್ಯಮ ಸಾಮರ್ಥ್ಯದ ಬಗ್ಗೆ ಒತ್ತಿ ಹೇಳುತ್ತಿದ್ದರು. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ನಮ್ಮ ದೇಶದ ವಿವಿಧ ನೈಸರ್ಗಿಕ ಮತ್ತು ಸಾಂಸ್ಕೃತಿಕ ಪರಂಪರೆಯ ತಾಣಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಸಚಿವರು ಹೇಳಿದರು.

 


(रिलीज़ आईडी: 2024425) आगंतुक पटल : 105
इस विज्ञप्ति को इन भाषाओं में पढ़ें: Tamil , English , Urdu , हिन्दी , Hindi_MP , Manipuri , Punjabi , Gujarati , Malayalam