ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ
azadi ka amrit mahotsav

ಕೇಂದ್ರ  ಯುವಜನ  ವ್ಯವಹಾರ ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವರಾಗಿ ಶ್ರೀಮತಿ ರಕ್ಷಾ ನಿಖಿಲ್ ಖಾಡ್ಸೆ ಅವರು ಅಧಿಕಾರ ಸ್ವೀಕಾರ

ಪ್ರಕಟಣಾ ದಿನಾಂಕ: 11 JUN 2024 4:58PM by PIB Bengaluru

ಶ್ರೀಮತಿ ರಕ್ಷಾ ನಿಖಿಲ್ ಖಾಡ್ಸೆ ಅವರು ಇಂದು ಶಾಸ್ತ್ರಿ ಭವನದಲ್ಲಿ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ಸಹಾಯಕ  ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಕ್ರೀಡಾ ಇಲಾಖೆಯ ಕಾರ್ಯದರ್ಶಿ ಮತ್ತು ಯುವಜನ  ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಹಾಗು ಸಚಿವಾಲಯದ ಹಿರಿಯ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು. ಶ್ರೀಮತಿ ರಕ್ಷಾ ನಿಖಿಲ್ ಖಾಡ್ಸೆ ಅವರು ತಮ್ಮ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಸಚಿವಾಲಯದ ಯೋಜನೆಗಳು ಮತ್ತು ಉಪಕ್ರಮಗಳ ಬಗ್ಗೆ ಸಚಿವಾಲಯದ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರಿಗೆ ವಿವರಿಸಿದರು.

*****


(ಪ್ರಕಟಣೆ ಐ.ಡಿ.: 2024442) ವಿಸಿಟರ್ ಕೌಂಟರ್ : 86
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Hindi_MP , Punjabi , Gujarati , Telugu , Malayalam