ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ
azadi ka amrit mahotsav

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಡಾ.ವೀರೇಂದ್ರ ಕುಮಾರ್ ಅವರು ಅಧಿಕಾರ ಸ್ವೀಕಾರ


ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಹಾಯಕ  ಸಚಿವರಾಗಿ ಶ್ರೀ ರಾಮದಾಸ್ ಅಠಾವಳೆ ಅವರು ಅಧಿಕಾರ ಸ್ವೀಕಾರ

प्रविष्टि तिथि: 11 JUN 2024 4:19PM by PIB Bengaluru

ಡಾ. ವೀರೇಂದ್ರ ಕುಮಾರ್  ಅವರು ಇಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಡಾ. ಕುಮಾರ್ ಅವರು ಈ ಜವಾಬ್ದಾರಿಯನ್ನು ತಮಗೆ ವಹಿಸಿಕೊಟ್ಟಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಸಚಿವರಾದ ಶ್ರೀ ರಾಮದಾಸ್ ಅಠಾವಳೆ ಮತ್ತು ಶ್ರೀ ಬಿ.ಎಲ್.ವರ್ಮಾ ಅವರೊಂದಿಗೆ ಸಚಿವಾಲಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ, ಡಾ. ಕುಮಾರ್ ಅವರು ಸಹಾಯಕ ಸಚಿವರಾದ ಶ್ರೀ ರಾಮದಾಸ್ ಅಠಾವಳೆ ಮತ್ತು ಶ್ರೀ ಬಿ.ಎಲ್.ವರ್ಮಾ ಅವರೊಂದಿಗೆ ಸಚಿವಾಲಯದ ಈವರೆಗಿನ ಸಾಧನೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪಕ್ಕೆ ಸಂಬಂಧಿಸಿದಂತೆ ಭವಿಷ್ಯದ ಮಾರ್ಗಸೂಚಿಯ ಬಗ್ಗೆ ಚರ್ಚಿಸಿದರು.

 

ಶ್ರೀ ರಾಮದಾಸ್ ಅಠಾವಳೆ ಅವರು ಕೂಡಾ ಇಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಹಾಯಕ ಸಚಿವರಾಗಿ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀ ಅಠಾವಳೆ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಧ್ಯೇಯಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು.

*****


(रिलीज़ आईडी: 2024458) आगंतुक पटल : 116
इस विज्ञप्ति को इन भाषाओं में पढ़ें: Punjabi , Odia , English , Urdu , हिन्दी , Hindi_MP , Marathi , Gujarati , Tamil , Telugu , Malayalam