ಭಾರೀ ಕೈಗಾರಿಕೆಗಳ ಸಚಿವಾಲಯ
ಬೃಹತ್ ಕೈಗಾರಿಕೆಗಳ ಸಚಿವರಾಗಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರವನ್ನು ಸ್ವೀಕರಿಸಿಕೊಂಡರು
प्रविष्टि तिथि:
11 JUN 2024 9:24PM by PIB Bengaluru
ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆಗಳ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.


ಭಾರೀ ಕೈಗಾರಿಕೆಗಳ ಸಚಿವಾಲಯ ಕಾರ್ಯದರ್ಶಿ ಶ್ರೀ ಕಮ್ರಾನ್ ರಿಜ್ವಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ದೆಹಲಿಯ ಉದ್ಯೋಗ ಭವನದಲ್ಲಿ ಸಚಿವರನ್ನು ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್ .ಡಿ.ಕುಮಾರಸ್ವಾಮಿ ಅವರು, ದೇಶದ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸುವ ಉದ್ದೇಶದಿಂದ ತಮ್ಮ ಸಚಿವಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ದೇಶದ ಅಭಿವೃದ್ಧಿಗೆ ತಾವು ಬದ್ಧವಾಗಿರುವುದಾಗಿ ಹೇಳಿದರು. ಇಡೀ ದೇಶದ ಸಮೃದ್ಧ ಬೆಳವಣಿಗೆಗೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಸಚಿವರು ಈ ವೇಳೆ ಭರವಸೆ ನೀಡಿದರು.
*****
(रिलीज़ आईडी: 2024468)
आगंतुक पटल : 223