ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಶ್ರೀಮತಿ ಅನುಪ್ರಿಯಾ ಪಟೇಲ್ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ  ಸಹಾಯಕ ಸಚಿವರಾಗಿ ಅಧಿಕಾರ ವಹಿಸಿಕೊಂಡರು

Posted On: 11 JUN 2024 2:56PM by PIB Bengaluru

ಶ್ರೀಮತಿ ಅನುಪ್ರಿಯಾ ಪಟೇಲ್ ಅವರು ಇಂದು ಇಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಾಯಕ ಸಚಿವರಾಗಿ ಅಧಿಕಾರ ವಹಿಸಿಕೊಂಡರು
 

 

ಶ್ರೀಮತಿ ಅನುಪ್ರಿಯಾ ಪಟೇಲ್ ಅವರು 2014, 2019 ಮತ್ತು 2024ರಲ್ಲಿ ಮಿರ್ಜಾಪುರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಅವರು ಜುಲೈ 2016 ರಿಂದ ಮೇ 2019 ರವರೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಲ್ಲಿ ಸಹಾಯಕ ಸಚಿವರಾಗಿದ್ದರು ಮತ್ತು ಜುಲೈ 2021 ರಿಂದ ಜೂನ್ 2024 ರವರೆಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದಲ್ಲಿ ಸಹಾಯಕ ಸಚಿವರಾಗಿದ್ದರು.
 
ಶ್ರೀಮತಿ ಪಟೇಲ್ ಅವರು ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಿಂದ ಹಿಡಿದು, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವರಾಗಿ ಇತ್ತೀಚೆಗಿನ ಪಾತ್ರದವರೆಗೆ ವಿವಿಧ ಸಾಮರ್ಥ್ಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
 
 

ಕೇಂದ್ರ ಆರೋಗ್ಯ ಕಾರ್ಯದರ್ಶಿ ಶ್ರೀ ಅಪೂರ್ವ ಚಂದ್ರ ಮತ್ತು ಹೆಚ್ಚುವರಿ ಕಾರ್ಯದರ್ಶಿ (ಆರೋಗ್ಯ) ಶ್ರೀಮತಿ ರೋಲಿ ಸಿಂಗ್ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು.
 

 

*****



(Release ID: 2024774) Visitor Counter : 18