ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡರು

Posted On: 11 JUN 2024 3:12PM by PIB Bengaluru

ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಇಂದು ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಹಾಯಕ ಸಚಿವರಾದ ಶ್ರೀ ಪ್ರತಾಪರಾವ್ ಜಾಧವ್ ಮತ್ತು ಶ್ರೀಮತಿ ಅನುಪ್ರಿಯಾ ಪಟೇಲ್ ಉಪಸ್ಥಿತರಿದ್ದರು.
 

ಶ್ರೀ ಜೆ.ಪಿ.ನಡ್ಡಾ ಅವರು 1975ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು.  1989ರ ಲೋಕಸಭಾ ಚುನಾವಣೆಯ ಸಮಯದಲ್ಲಿ, ಅವರಿಗೆ ಬಿಜೆಪಿಯ ಯುವ ಘಟಕದ ಚುನಾವಣಾ ಉಸ್ತುವಾರಿಯಾಗಿ ಪ್ರಮುಖ ಜವಾಬ್ದಾರಿಯನ್ನು ವಹಿಸಲಾಯಿತು. ನಂತರ, ಅವರು ತಮ್ಮ ತವರು ರಾಜ್ಯ ಹಿಮಾಚಲ ಪ್ರದೇಶದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರು ಬಾರಿ ಗೆದ್ದರು. ಅವರು ಹಿಮಾಚಲ ಪ್ರದೇಶದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಕಾರ್ಯದರ್ಶಿಯ ಜವಾಬ್ದಾರಿಗಳನ್ನು ಸಹ ನಿರ್ವಹಿಸಿದ್ದಾರೆ. ಅವರು ನವೆಂಬರ್ 2014 ರಿಂದ ಮೇ 2019ರವರೆಗೆ ಕೇಂದ್ರ ಆರೋಗ್ಯ ಸಚಿವರಾಗಿದ್ದರು.

 

 ಶ್ರೀ ಜೆ.ಪಿ.ನಡ್ಡಾ ಅವರು ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು, ಅಲ್ಲಿ ಅವರಿಗೆ ಹಾಲಿ ಯೋಜನೆಗಳ ಬಗ್ಗೆ ವಿವರಿಸಲಾಯಿತು.
 
 

 
ಕೇಂದ್ರ ಆರೋಗ್ಯ ಕಾರ್ಯದರ್ಶಿ ಶ್ರೀ ಅಪೂರ್ವ ಚಂದ್ರ ಮತ್ತು ಹೆಚ್ಚುವರಿ ಕಾರ್ಯದರ್ಶಿ (ಆರೋಗ್ಯ) ಶ್ರೀಮತಿ ರೋಲಿ ಸಿಂಗ್ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು.


*****



(Release ID: 2024790) Visitor Counter : 22