ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
azadi ka amrit mahotsav

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರಾಗಿ ಶ್ರೀ ಪ್ರತಾಪರಾವ್ ಗಣಪತರಾವ್ ಜಾಧವ್ ಅವರು ಅಧಿಕಾರ ವಹಿಸಿಕೊಂಡರು


प्रविष्टि तिथि: 11 JUN 2024 1:53PM by PIB Bengaluru

ಶ್ರೀ ಪ್ರತಾಪರಾವ್ ಜಾಧವ್ ಅವರು ಇಂದು ಇಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಅವರು ಆಯುಷ್ ಸಚಿವಾಲಯದ ಕೇಂದ್ರ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಖಾತೆಯನ್ನು ಸಹ ಹೊಂದಿದ್ದಾರೆ.

 

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಅಧಿಕಾರ ವಹಿಸಿಕೊಳ್ಳುವ ಮುನ್ನಾ ಶ್ರೀ ಪ್ರತಾಪರಾವ್ ಜಾಧವ್ ಅವರು ತಮ್ಮ ನಿವಾಸದಲ್ಲಿ ಸಸಿ ನೆಟ್ಟರು. ಅಧಿಕಾರ ವಹಿಸಿಕೊಂಡ ನಂತರ ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆಯನ್ನೂ ಕೂಡಾ ಮಾಡಿದರು.

 

ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ , ಮಹಾರಾಷ್ಟ್ರ ರಾಜ್ಯದ ಸಚಿವರಾಗಿ ಮತ್ತು ಕ್ರೀಡೆ, ಯುವ ಕಲ್ಯಾಣ ಮತ್ತು ನೀರಾವರಿ ಸೇರಿದಂತೆ ವಿವಿಧ ಸಾಮರ್ಥ್ಯಗಳಲ್ಲಿ ಮಹಾರಾಷ್ಟ್ರದ ಜನರನ್ನು ಶ್ರೀ ಪ್ರತಾಪರಾವ್ ಜಾಧವ್ ಅವರು ಮೂರು ಅವಧಿಗೆ ಪ್ರತಿನಿಧಿಸಿದ್ದಾರೆ. ಅವರು 2009, 2014, 2019 ಮತ್ತು 2024 ರಲ್ಲಿ ಬುಲ್ಧಾನಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅವರು 1997 ರಿಂದ 1999 ರವರೆಗೆ ಮಹಾರಾಷ್ಟ್ರ ಸರ್ಕಾರದ ಕ್ರೀಡೆ, ಯುವ ಕಲ್ಯಾಣ ಮತ್ತು ನೀರಾವರಿ ರಾಜ್ಯ ಸಚಿವರಾಗಿದ್ದರು. ಲೋಕಸಭೆಯಲ್ಲಿ, ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯ ಅಧ್ಯಕ್ಷರಂತಹ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ.

 

ಕೇಂದ್ರ ಆರೋಗ್ಯ ಸಚಿವ ಶ್ರೀ ಜೆ ಪಿ ನಡ್ಡಾ ಅವರ ಜೊತೆ ಮತ್ತು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಂವಾದ ನಡೆಸಿದರು.

 

ಕೇಂದ್ರ ಆರೋಗ್ಯ ಕಾರ್ಯದರ್ಶಿ ಶ್ರೀ ಅಪೂರ್ವ ಚಂದ್ರ ಮತ್ತು ಹೆಚ್ಚುವರಿ ಕಾರ್ಯದರ್ಶಿ (ಆರೋಗ್ಯ) ಶ್ರೀಮತಿ ರೋಲಿ ಸಿಂಗ್, ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಬರಮಾಡಿಕೊಂಡರು. 


*****


(रिलीज़ आईडी: 2024935) आगंतुक पटल : 127
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Hindi_MP , Gujarati , Tamil , Telugu