ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ

ಶ್ರೀಮತಿ ಅನುಪ್ರಿಯಾ ಪಟೇಲ್ ಅವರು ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು

Posted On: 11 JUN 2024 3:44PM by PIB Bengaluru

ಶ್ರೀಮತಿ ಅನುಪ್ರಿಯಾ ಪಟೇಲ್ ಅವರು 2024ರ ಜೂನ್ 11ರಂದು ಶಾಸ್ತ್ರಿ ಭವನದಲ್ಲಿ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು.

 

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಮತಿ ಅನುಪ್ರಿಯಾ ಪಟೇಲ್ ಅವರು, ದೇಶ ಸೇವೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದರು. 

 

ಪ್ರಧಾನಮಂತ್ರಿಯವರ ನಾಯಕತ್ವ ಮತ್ತು ಕೇಂದ್ರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾರವರ ಮಾರ್ಗದರ್ಶನದಲ್ಲಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯವು 2047ರ ವೇಳೆಗೆ ಶ್ರೀ ನರೇಂದ್ರ ಮೋದಿಯವರ ವಿಕಸಿತ ಭಾರತದ ಕನಸನ್ನು ನನಸು ಮಾಡಲು ಶ್ರಮಿಸುವುದು. ಈ ದಿಶೆಯಲ್ಲಿ, "100 ದಿನಗಳ ಕ್ರಿಯಾ ಯೋಜನೆಯನ್ನು" ಒಳಗೊಂಡಂತೆ ವಿವಿಧ ಯೋಜನೆಗಳನ್ನು ಪ್ರಾರಂಭಿಸಲಾಗುವುದು. ಈ ಉದ್ದೇಶ ಸಾಧಿಸುವ ಸಲುವಾಗಿ ಮುಂದಿನ ಐದು ವರ್ಷಗಳಲ್ಲಿ ವಿವಿಧ ಉಪಕ್ರಮಗಳನ್ನು ಪ್ರಾರಂಭಿಸಲು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಮಾತುಕತೆ ನಡೆಸಿ, ಪ್ರಗತಿಯನ್ನು ಪರಿಶೀಲಿಸುವುದಾಗಿ ಅವರು ಉಲ್ಲೇಖಿಸಿದರು.  

ಇದಕ್ಕೂ ಮೊದಲು ಅವರು 2021ರಿಂದ ಇತ್ತೀಚಿನವರೆಗೆ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವರಾಗಿ ಮತ್ತು 2016-2019ರ ಮಧ್ಯೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಮಹಿಳಾ ಸಬಲೀಕರಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಸ್ತೆ ಸಾರಿಗೆ, ಹೆದ್ದಾರಿಗಳು ಮತ್ತು ಹಡಗು, ರೈಲ್ವೆ ಸಮಾವೇಶಗಳು, ಇಂಧನದಂತಹ ವಿವಿಧ ಸಂಸದೀಯ ಸಮಿತಿಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ.

*****
 



(Release ID: 2024942) Visitor Counter : 16