ರೈಲ್ವೇ ಸಚಿವಾಲಯ
ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಶ್ರೀ ರವನೀತ್ ಸಿಂಗ್ ಅಧಿಕಾರ ಸ್ವೀಕಾರ
"ರೈಲ್ವೆ ಸಾಮಾನ್ಯ ಜನರನ್ನು ಸಂಪರ್ಕಿಸುತ್ತಿದೆ, ಇದು ಬಹುದೊಡ್ಡ ಪಾತ್ರ ವಹಿಸುತ್ತಿದೆ, ಅದು ತಂಡವಾಗಿ ಮುನ್ನಡೆಸುತ್ತಿದೆ" - ಶ್ರೀ ರವನೀತ್ ಸಿಂಗ್
प्रविष्टि तिथि:
11 JUN 2024 3:34PM by PIB Bengaluru
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ ರವನೀತ್ ಸಿಂಗ್ ಅವರು ದೆಹಲಿಯ ರೈಲ್ ಭವನದಲ್ಲಿಂದು ಅಧಿಕಾರ ಸ್ವೀಕರಿಸಿದರು. ಅವರಿಗೆ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ರೈಲ್ ಭವನಕ್ಕೆ ಆಗಮಿಸಿದ ಸಚಿವರನ್ನು ರೈಲ್ವೆ ಮಂಡಳಿಯ ಅಧ್ಯಕ್ಷೆ ಮತ್ತು ಸಿಇಒ ಶ್ರೀಮತಿ ಜಯವರ್ಮ ಸಿನ್ಹಾ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಸ್ವಾಗತಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಶ್ರೀ ರವನೀತ್ ಸಿಂಗ್, “ಇಂದು ನಾನು ರೈಲ್ವೆ ಖಾತೆ ರಾಜ್ಯ ಸಚಿವನಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದೇನೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ, ಗೃಹ ಸಚಿವ ಶ್ರೀ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಸಚಿವ ಶ್ರೀ ಜೆ.ಪಿ. ನಡ್ಡಾ ಮತ್ತು ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ನಾವು ರೈಲ್ವೆ ಅಧಿಕಾರಿಗಳೊಂದಿಗೆ ಸೇರಿ ಒಟ್ಟಾಗಿ ಕೆಲಸ ಮಾಡುತ್ತೇವೆ. ನಾನು ದೇಶದ ನಾಗರಿಕರನ್ನು ಸಹ ಇದೇ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ರೈಲ್ವೆ ಸಾಮಾನ್ಯ ಜನರನ್ನು ಸಂಪರ್ಕಿಸುತ್ತಿದೆ, ಇದು ಬಹುದೊಡ್ಡ ಪಾತ್ರ ವಹಿಸುತ್ತಿದೆ. ರೈಲುಗಳು ನಿರಂತರವಾಗಿ 24X7 ಕಾಲದಲ್ಲಿ ಚಲಿಸುತ್ತಿವೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜಿ ಮಾರ್ಗದರ್ಶನದಲ್ಲಿ ಅದನ್ನು ಮುಂದುವರಿಸಲು ನಾವು ತಂಡವಾಗಿ ಕೆಲಸ ಮಾಡುತ್ತೇವೆ ಎಂದರು.
*****
(रिलीज़ आईडी: 2024955)
आगंतुक पटल : 108