ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವಾಲಯ
ಕೇಂದ್ರ ಸಚಿವ ಶ್ರೀ ರಾಜೀವ್ ರಂಜನ್ ಸಿಂಗ್ ಅವರು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಮತ್ತು ಪಂಚಾಯತ್ ರಾಜ್ ಸಚಿವಾಲಯದ ಹೊಣೆಗಾರಿಕೆ ವಹಿಸಿಕೊಂಡರು
ರಾಜ್ಯ ಸಚಿವರಾದ ಶ್ರೀ ಜಾರ್ಜ್ ಕುರಿಯನ್ ಮತ್ತು ಪ್ರೊ. ಎಸ್.ಪಿ. ಸಿಂಗ್ ಬಘೇಲ್ ಅವರೂ ಅಧಿಕಾರ ವಹಿಸಿಕೊಂಡರು
प्रविष्टि तिथि:
11 JUN 2024 3:10PM by PIB Bengaluru
ಕೇಂದ್ರ ಸಚಿವ ಶ್ರೀ ರಾಜೀವ್ ರಂಜನ್ ಸಿಂಗ್ ಅವರು ಇಂದು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಮತ್ತು ಪಂಚಾಯತ್ ರಾಜ್ ಸಚಿವಾಲಯದ ಉಸ್ತುವಾರಿ ವಹಿಸಿಕೊಂಡರು. ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಚಿವರು, ನರೇಂದ್ರ ಮೋದಿ ಸರ್ಕಾರದ ದೃಷ್ಟಿ ಮತ್ತು ನೀತಿಗಳ ಅನುಷ್ಠಾನದಲ್ಲಿ ನಿರಂತರತೆ ಇರುತ್ತದೆ ಎಂದು ಹೇಳಿದರು. ಈ ದೃಷ್ಟಿಕೋನದ ಅನುಷ್ಠಾನದಲ್ಲಿ ಕಂಡುಬರುವ ಯಾವುದೇ ಅಡೆತಡೆಗಳನ್ನು ತೆಗೆದುಹಾಕುವತ್ತ ಗಮನ ಹರಿಸಲಾಗುವುದು ಎಂದು ಶ್ರೀ ಸಿಂಗ್ ಹೇಳಿದರು.

ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಹಾಯಕ ಸಚಿವ ಪ್ರೊ.ಎಸ್.ಪಿ.ಸಿಂಗ್ ಬಘೇಲ್ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಹಾಯಕ ಸಚಿವ ಜಾರ್ಜ್ ಕುರಿಯನ್ ಅವರೂ ತಮ್ಮ ಖಾತೆಗಳ ಉಸ್ತುವಾರಿ ವಹಿಸಿಕೊಂಡರು. ಗೌರವಾನ್ವಿತ ಸಚಿವರನ್ನು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಚಿವಾಲಯಗಳ ಇತರ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

(रिलीज़ आईडी: 2024961)
आगंतुक पटल : 110