ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವರಾಗಿ ಶ್ರೀ ಜಿತಿನ್ ಪ್ರಸಾದ  ಅಧಿಕಾರ ಸ್ವೀಕಾರ

Posted On: 11 JUN 2024 6:29PM by PIB Bengaluru

ಶ್ರೀ ಜಿತಿನ್ ಪ್ರಸಾದ ಅವರು ಇಂದು ನವದೆಹಲಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. 
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಶ್ರೀ ಜಿತಿನ್ ಪ್ರಸಾದ ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.


ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ಶ್ರೀ ಸುನಿಲ್ ಬರ್ತ್ವಾಲ್ ಮತ್ತು ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ (ಡಿಪಿಐಐಟಿ) ಶ್ರೀ ರಾಜೇಶ್ ಕುಮಾರ್ ಸಿಂಗ್ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

*****
 



(Release ID: 2024994) Visitor Counter : 19