ಪ್ರಧಾನ ಮಂತ್ರಿಯವರ ಕಛೇರಿ
ಕುವೈತ್ ನಗರದಲ್ಲಿ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
12 JUN 2024 7:17PM by PIB Bengaluru
ಕುವೈತ್ ನಗರದಲ್ಲಿ ಅಗ್ನಿ ಅವಘಡದಿಂದ ಸಂಭವಿಸಿದ ಜೀವಗಳ ಹಾನಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು.
ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ “ಎಕ್ಸ್” ಪೋಸ್ಟ್ ಹಂಚಿಕೊಂಡಿರುವ ಪ್ರಧಾನ ಮಂತ್ರಿ;
“ಕುವೈತ್ ಸಿಟಿಯಲ್ಲಿ ಸಂಭವಿಸಿದ ಅಗ್ನಿ ದುರಂತ ದುಃಖ ತಂದಿದೆ. ಅಪಘಾತದಲ್ಲಿ ಮಡಿದವರ ಸಂಬಂಧಿಕರು ಮತ್ತು ಆತ್ಮೀಯರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ” ಎಂದು ಧೈರ್ಯ ತುಂಬಿದ್ದಾರೆ.
*****
(ಪ್ರಕಟಣೆ ಐ.ಡಿ.: 2025006)
ವಿಸಿಟರ್ ಕೌಂಟರ್ : 103
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
Marathi
,
हिन्दी
,
Hindi_MP
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam