ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿ ಶ್ರೀ ಜಗತ್ ಪ್ರಕಾಶ್ ನಡ್ಡಾ ಅಧಿಕಾರ ಸ್ವೀಕಾರ
Posted On:
11 JUN 2024 5:32PM by PIB Bengaluru
ಶ್ರೀ ಜಗತ್ ಪ್ರಕಾಶ್ ನಡ್ಡಾ ದೆಹಲಿಯಲ್ಲಿಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶ್ರೀ.ಜೆ.ಪಿ.ನಡ್ಡಾ ಅವರು 1975 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. 1989 ರಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರಿಗೆ ಬಿಜೆಪಿಯ ಯುವ ಘಟಕದ ಉಸ್ತುವಾರಿಯ ಮಹತ್ವದ ಜವಾಬ್ದಾರಿ ನೀಡಲಾಗಿತ್ತು. ಬಳಿಕ, ಅವರು ತಮ್ಮ ತವರು ರಾಜ್ಯ ಹಿಮಾಚಲ ಪ್ರದೇಶದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದು ಮೂರು ಬಾರಿ ಚುನಾವಣೆಯಲ್ಲಿ ಜಯಶಾಲಿಯಾಗಿದ್ದರು. ಅವರು ಹಿಮಾಚಲ ಪ್ರದೇಶದಲ್ಲಿ ಸಂಪುಟ ಸಚಿವರಾಗಿದ್ದರು.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಕಾರ್ಯದರ್ಶಿಯ ಜವಾಬ್ದಾರಿಯನ್ನೂ ಅವರು ವಹಿಸಿಕೊಂಡಿದ್ದರು. ಅವರು ನವೆಂಬರ್ 2014 ರಿಂದ ಮೇ 2019 ರವರೆಗೆ ಕೇಂದ್ರ ಆರೋಗ್ಯ ಸಚಿವರಾಗಿದ್ದರು.
ರಸಗೊಬ್ಬರ, ಔಷಧ, ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಇಲಾಖೆಯ ಕಾರ್ಯದರ್ಶಿಗಳು ಕೇಂದ್ರ ಸಚಿವರನ್ನು ಬರಮಾಡಿಕೊಂಡರು.
ಶ್ರೀ.ಜೆ.ಪಿ.ನಡ್ಡಾ ಅವರು ಅಧಿಕಾರ ವಹಿಸಿಕೊಂಡ ಬಳಿಕ ರಸಗೊಬ್ಬರ, ಔಷಧ, ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ಪ್ರಸ್ತುತ ಪ್ರಗತಿಯಲ್ಲಿರುವ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಲಾಯಿತು.
*****
(Release ID: 2025016)
Visitor Counter : 44