ಪ್ರಧಾನ ಮಂತ್ರಿಯವರ ಕಛೇರಿ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪೆಮಾ ಖಂಡು ಅವರಿಗೆ ಪ್ರಧಾನಮಂತ್ರಿ  ಅಭಿನಂದನೆ

Posted On: 13 JUN 2024 1:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪೆಮಾ ಖಂಡು ಅವರನ್ನು ಅಭಿನಂದಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ಇತರ ಸಚಿವರನ್ನು ಅಭಿನಂದಿಸಿದ ಅವರು, ಇನ್ನೂ ವೇಗದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಜನರ ಸೇವೆ ಮಾಡುವ ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು.

ಈ ಸಂಬಂಧ ಪ್ರಧಾನಮಂತ್ರಿಯವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪೆಮಾ ಖಂಡು ಜೀ ಅವರಿಗೆ ಅಭಿನಂದನೆಗಳು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಜನರ ಸೇವೆ ಮಾಡುವ ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು. ಈ ತಂಡವು ರಾಜ್ಯವು ಇನ್ನೂ ತ್ವರಿತವಾಗಿ ಅಭಿವೃದ್ಧಿ ಹೊಂದುವುದನ್ನು ಖಚಿತಪಡಿಸುತ್ತದೆ," ಎಂದು ಹೇಳಿದರು.

 

*****



(Release ID: 2025283) Visitor Counter : 26