ಪ್ರಧಾನ ಮಂತ್ರಿಯವರ ಕಛೇರಿ

ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ

Posted On: 14 JUN 2024 4:28PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಇಟಲಿಯ ಅಪುಲಿಯಾದಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದರಿಂದ ಶುಭಾಶಯ ಕೋರಿದ  ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ತಿಳಿಸಿದರು.

ಉಭಯ ನಾಯಕರು ಭಾರತ-ಫ್ರಾನ್ಸ್ ದ್ವಿಪಕ್ಷೀಯ ಸಂಬಂಧಗಳ ಕುರಿತು ಪರಿಶೀಲನೆ ನಡೆಸಿದರು. "ಹೊರೈಜಾನ್ 2047' ಮಾರ್ಗಸೂಚಿ ಮತ್ತು ಇಂಡೋ-ಪೆಸಿಫಿಕ್ ಮಾರ್ಗಸೂಚಿಯತ್ತ ಕೇಂದ್ರೀಕರಿಸಿದರು. ರಕ್ಷಣೆ, ಪರಮಾಣು, ಬಾಹ್ಯಾಕಾಶ, ಶಿಕ್ಷಣ, ಹವಾಮಾನ ಕ್ರಿಯೆ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಸಂಪರ್ಕ ಮತ್ತು ಸಾಂಸ್ಕೃತಿಕ ಕ್ಷೇತ್ರ,  ರಾಷ್ಟ್ರೀಯ ವಸ್ತುಸಂಗ್ರಹಾಲಯ ಪಾಲುದಾರಿಕೆ ಮತ್ತು ಜನರ-ಜನರ ನಡುವಿನ ಸಂಬಂಧವನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಸಲಾಯಿತು.

'ಮೇಕ್ ಇನ್ ಇಂಡಿಯಾ' ಮೇಲೆ ಹೆಚ್ಚಿನ ಗಮನವನ್ನು ನೀಡುವ ಮೂಲಕ ವ್ಯೂಹಾತ್ಮಕ ರಕ್ಷಣಾ ಸಹಕಾರವನ್ನು ಇನ್ನಷ್ಟು ತೀವ್ರಗೊಳಿಸಲು ಕುರಿತು ಉಭಯ ನಾಯಕರು  ಒಪ್ಪಿಕೊಂಡರು. 2025 ರಲ್ಲಿ ಫ್ರಾನ್ಸ್‌ನಲ್ಲಿ ಆಯೋಜಿಸಲಿರುವ ಮುಂಬರುವ ಕೃತಕ ಬುದ್ಧಿಮತ್ತೆ (AI) ಶೃಂಗಸಭೆ ಮತ್ತು ವಿಶ್ವಸಂಸ್ಥೆಯ ಸಾಗರಗಳ ಸಮ್ಮೇಳನದ ಸಂದರ್ಭದಲ್ಲಿ ನಿಕಟವಾಗಿ ಕೆಲಸ ಮಾಡುವಾಗ ಕೃತಕ ಬುದ್ಧಿಮತ್ತೆ (AI) ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಶಕ್ತಿ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಕುರಿತು ಸಮಾಲೋಚನೆ ನಡೆಸಿದರು. 

ಉಭಯ ನಾಯಕರು ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ ಮತ್ತು ಫ್ರಾನ್ಸ್ ನಡುವಿನ ಬಲವಾದ ಮತ್ತು ವಿಶ್ವಾಸಾರ್ಹ ಕಾರ್ಯತಂತ್ರದ ಸಹಭಾಗಿತ್ವವು ಸ್ಥಿರ ಮತ್ತು ಸಮೃದ್ಧ ಜಾಗತಿಕ ಕ್ರಮಕ್ಕಾಗಿ ನಿರ್ಣಾಯಕವಾಗಿದೆ. ಅದನ್ನು ಹೆಚ್ಚಿನ ಎತ್ತರಕ್ಕೆ ಏರಿಸಲು ನಿಕಟವಾಗಿ ಕೆಲಸ ಮಾಡಬೇಕಾಗಿದೆ ಎಂದು ಉಭಯತ್ರರು ಚರ್ಚಿಸಿದರು.

ಮುಂಬರುವ ಪ್ಯಾರಿಸ್ ಒಲಂಪಿಕ್ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕೆ ಪ್ರಧಾನಮಂತ್ರಿಯವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಶುಭ ಹಾರೈಸಿದರು.

*****
 



(Release ID: 2025299) Visitor Counter : 39