ಪ್ರಧಾನ ಮಂತ್ರಿಯವರ ಕಛೇರಿ

G7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್‌ ಕಿಂಗ್‌ ಡಮ್‌ ಪ್ರಧಾನಿ ಜೊತೆಗೆ ಪ್ರಧಾನ ಮಂತ್ರಿ ಮಾತುಕತೆ

Posted On: 14 JUN 2024 5:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಶ್ರೀ ರಿಷಿ ಸುನಕ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. 

ಇಂದು ಇಟಲಿಯ ಅಪುಲಿಯಾದಲ್ಲಿ ನಡೆಯುತ್ತಿರುವ G7 ಶೃಂಗಸಭೆಯ ನೇಪಥ್ಯದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸುನಕ್ ಅವರು ಐತಿಹಾಸಿಕ ಮೂರನೇ ಬಾರಿಗೆ ಪ್ರಧಾನಮಂತ್ರಿ ಹುದ್ದೆಗೇರಿದ್ದಕ್ಕೆ ಅಭಿನಂದಿಸಿದರು. ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಎರಡೂ ದೇಶಗಳ ಹಂಚಿಕೆಯ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.

2030 ರ ಮಾರ್ಗಸೂಚಿಯ ಅನುಷ್ಠಾನದ ಕುರಿತು ಉಭಯರು ಚರ್ಚಿಸಿದರು ಮತ್ತು ಉನ್ನತ ಮಟ್ಟದ ರಾಜಕೀಯ ಸಮಾಲೋಚನೆಗಳು, ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಆರ್ಥಿಕ ಸಹಯೋಗ, ನಿರ್ಣಾಯಕ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರಗಳು ಮತ್ತು ಜನರಿಂದ- ಸೇರಿದಂತೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಕ್ಷೇತ್ರಗಳಲ್ಲಿನ ಪ್ರಗತಿಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. 

ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ಉಭಯತ್ರರು ತೃಪ್ತಿ ವ್ಯಕ್ತಪಡಿಸಿದರು. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ಬಗ್ಗೆ ಚರ್ಚಿಸಿದರು.

ಮುಂದಿನ ತಿಂಗಳು ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಯುನೈಟೆಡ್ ಕಿಂಗ್‌ಡಂನ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು.

*****



(Release ID: 2025509) Visitor Counter : 11