ಪ್ರಧಾನ ಮಂತ್ರಿಯವರ ಕಛೇರಿ

ಜಿ 7 ಶೃಂಗಸಭೆಯ ಭಾಗವಾಗಿ  ಜಪಾನ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ  ಸಭೆ

Posted On: 14 JUN 2024 11:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಅಪುಲಿಯಾದಲ್ಲಿ ನಡೆದ ಜಿ-7 ಶೃಂಗಸಭೆಯ ವೇಳೆ ಜಪಾನ್ ಪ್ರಧಾನಿ ಘನತೆವೆತ್ತ ಶ್ರೀ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ನೀಡಿದ ಅಭಿನಂದನಾ ಹಾರೈಕೆಗಳಿಗಾಗಿ ಪ್ರಧಾನಮಂತ್ರಿ ಮೋದಿ ಅವರು, ಪ್ರಧಾನಮಂತ್ರಿ ಕಿಶಿಡಾ ಅವರಿಗೆ ಧನ್ಯವಾದ ಅರ್ಪಿಸಿದರು. ಜಪಾನ್ ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ತಮ್ಮ ಮೂರನೇ ಅವಧಿಯಲ್ಲಿಯೂ ಆದ್ಯತೆಯನ್ನು ಪಡೆಯುತ್ತದೆ ಎಂದು ಅವರು ದೃಢಪಡಿಸಿದರು. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವು 10ನೇ ವರ್ಷದಲ್ಲಿದೆ ಎಂದು ಇಬ್ಬರೂ ನಾಯಕರು ಗಮನಿಸಿದರು ಮತ್ತು ಸಂಬಂಧದಲ್ಲಿ ಆಗಿರುವ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಸಹಕಾರವನ್ನು ಮತ್ತಷ್ಟು ತೀವ್ರಗೊಳಿಸುವ ಮಾರ್ಗಗಳು, ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳನ್ನು ಸೇರಿಸುವುದು ಮತ್ತು ಬಿ 2 ಬಿ ಮತ್ತು ಪಿ 2 ಪಿ ಸಹಕಾರವನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಅವರು ಚರ್ಚಿಸಿದರು.

ಭಾರತದಲ್ಲಿ ಚಲನಶೀಲತೆಯ ಮುಂದಿನ ಹಂತಕ್ಕೆ ನಾಂದಿ ಹಾಡುವ ಹೆಗ್ಗುರುತಾದ, ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆ, 2022-2027ರ ಅವಧಿಯಲ್ಲಿ ಭಾರತದಲ್ಲಿ 5 ಟ್ರಿಲಿಯನ್ ಯೆನ್ ಮೌಲ್ಯದ ಜಪಾನಿನ ಹೂಡಿಕೆಯ ಗುರಿ ಮತ್ತು ನಮ್ಮ ಉತ್ಪಾದನಾ ಸಹಕಾರವನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ಭಾರತ-ಜಪಾನ್ ಕೈಗಾರಿಕಾ ಸ್ಪರ್ಧಾತ್ಮಕತೆ ಪಾಲುದಾರಿಕೆ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ಭಾರತ ಮತ್ತು ಜಪಾನ್ ಸಹಯೋಗ ಹೊಂದಿವೆ. ಇಬ್ಬರೂ ಪ್ರಧಾನ ಮಂತ್ರಿಗಳ ನಡುವಿನ ಭೇಟಿಯು ಈಗ ನಡೆಯುತ್ತಿರುವ ಸಹಕಾರದ ಕೆಲವು ಕಾರ್ಯಗಳನ್ನು ಪರಿಶೀಲಿಸಲು ಅವಕಾಶವನ್ನು ಒದಗಿಸಿತು.

ಇಬ್ಬರೂ ನಾಯಕರು ಮುಂದಿನ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ತಮ್ಮ ಚರ್ಚೆಯನ್ನು ಮುಂದುವರಿಸಲು ಎದುರು ನೋಡುತ್ತಿದ್ದಾರೆ.

*****



(Release ID: 2025552) Visitor Counter : 25