ಗೃಹ ವ್ಯವಹಾರಗಳ ಸಚಿವಾಲಯ
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು
ಕಾಶ್ಮೀರ ಕಣಿವೆಯಲ್ಲಿ ಪ್ರದೇಶ ಪ್ರಾಬಲ್ಯ ಯೋಜನೆ ಮತ್ತು ಜಮ್ಮು ವಿಭಾಗದಲ್ಲಿ ಶೂನ್ಯ ಭಯೋತ್ಪಾದನಾ ಯೋಜನೆ ಮೂಲಕ ಸಾಧಿಸಿದ ಯಶಸ್ಸನ್ನು ಪುನರಾವರ್ತಿಸಲು ಕೇಂದ್ರ ಗೃಹ ಸಚಿವರು ಸಂಸ್ಥೆಗಳಿಗೆ ನಿರ್ದೇಶಿಸಿದರು
ವಿನೂತನ ವಿಧಾನಗಳ ಮೂಲಕ ಭಯೋತ್ಪಾದಕರನ್ನು ಹತ್ತಿಕ್ಕುವ ಮೂಲಕ ಮಾದರಿಯಾಗಲು ಮೋದಿ ಸರ್ಕಾರ ಬದ್ಧವಾಗಿದೆ
ಗೃಹ ಸಚಿವರು ಎಲ್ಲಾ ಸಂಸ್ಥೆಗಳಿಗೆ ಮಿಷನ್ ಮೋಡ್ ನಲ್ಲಿ ಕೆಲಸ ಮಾಡಲು ಮತ್ತು ಸಂಘಟಿತ ರೀತಿಯಲ್ಲಿ ತ್ವರಿತ ಪ್ರತಿಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸಿದರು
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವು ನಿರ್ಣಾಯಕ ಹಂತದಲ್ಲಿದೆ, ಇತ್ತೀಚಿನ ಘಟನೆಗಳು ಭಯೋತ್ಪಾದನೆಯು ಹೆಚ್ಚು ಸಂಘಟಿತವಾದ ಭಯೋತ್ಪಾದಕ ಹಿಂಸಾಚಾರದ ಕೃತ್ಯಗಳಿಂದ ಕೇವಲ ಪ್ರಾಕ್ಸಿ ಯುದ್ಧಕ್ಕೆ ಕುಗ್ಗಿರುವುದನ್ನು ತೋರಿಸುತ್ತದೆ, ನಾವು ಅದನ್ನು ಬೇರುಸಹಿತ ಕಿತ್ತು ಹಾಕಲು ನಿರ್ಧರಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು
ಶ್ರೀ ಅಮಿತ್ ಶಾ ಅವರು ಭದ್ರತಾ ಸಂಸ್ಥೆಗಳ ನಡುವೆ ತಡೆರಹಿತ ಸಮನ್ವಯ, ದುರ್ಬಲ ಪ್ರದೇಶಗಳನ್ನು ಗುರುತಿಸುವಿಕೆ ಮತ್ತು ಅಂತಹ ಪ್ರದೇಶಗಳ ಭದ್ರತಾ ಕಳವಳಗಳನ್ನು ಪರಿಹರಿಸಲು ಒತ್ತು ನೀಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಪುನರುಚ್ಚರಿಸಿದ ಗೃಹ ಸಚಿವರು, ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾ
Posted On:
16 JUN 2024 5:11PM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಸಂಸ್ಥೆಯ ನಿರ್ದೇಶಕರು, ಸೇನಾ ಮುಖ್ಯಸ್ಥ (ನಿಯೋಜಿತ) ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಸೇರಿದಂತೆ ಹಿರಿಯ ಸೇನಾ ಅಧಿಕಾರಿಗಳು, ಸಿಎಪಿಎಫ್ ಗಳ ಮಹಾನಿರ್ದೇಶಕರು, ಜಮ್ಮು ಮತ್ತರು ಕಾಶ್ಮೀರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಶ್ಮೀರ ಕಣಿವೆಯಲ್ಲಿ ಪ್ರದೇಶ ಪ್ರಾಬಲ್ಯ ಯೋಜನೆ ಮತ್ತು ಜಮ್ಮು ವಿಭಾಗದಲ್ಲಿ ಶೂನ್ಯ ಭಯೋತ್ಪಾದನಾ ಯೋಜನೆ ಮೂಲಕ ಸಾಧಿಸಿದ ಯಶಸ್ಸನ್ನು ಪುನರಾವರ್ತಿಸುವಂತೆ ಕೇಂದ್ರ ಗೃಹ ಸಚಿವರು ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದರು. ವಿನೂತನ ಮಾರ್ಗಗಳಲ್ಲಿ ಭಯೋತ್ಪಾದಕರನ್ನು ಹತ್ತಿಕ್ಕುವ ಮೂಲಕ ಮಾದರಿಯನ್ನು ಸ್ಥಾಪಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು. ಎಲ್ಲಾ ಭದ್ರತಾ ಏಜೆನ್ಸಿಗಳು ಮಿಷನ್ ಮೋಡ್ ನಲ್ಲಿ ಕೆಲಸ ಮಾಡುವಂತೆ ಮತ್ತು ಸಂಘಟಿತ ರೀತಿಯಲ್ಲಿ ತ್ವರಿತ ಪ್ರತಿಕ್ರಿಯೆಯನ್ನು ಖಚಿತಪಡಿಸಿಕೊಳ್ಳುವಂತೆ ಶ್ರೀ ಅಮಿತ್ ಶಾ ನಿರ್ದೇಶಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವು ನಿರ್ಣಾಯಕ ಹಂತದಲ್ಲಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ಇತ್ತೀಚಿನ ಘಟನೆಗಳು ಭಯೋತ್ಪಾದನೆಯು ಹೆಚ್ಚು ಸಂಘಟಿತ ಭಯೋತ್ಪಾದಕ ಹಿಂಸಾಚಾರದ ಕೃತ್ಯಗಳಿಂದ ಕೇವಲ ಪ್ರಾಕ್ಸಿ ಯುದ್ಧಕ್ಕೆ ಕುಗ್ಗುವಂತೆ ಮಾಡಿರುವುದನ್ನು ತೋರಿಸುತ್ತವೆ, ಅದನ್ನೂ ಬೇರು ಸಮೇತ ಕಿತ್ತೆಸೆಯಲು ಸಂಕಲ್ಪ ಮಾಡಿದ್ದೇವೆ ಎಂದು ಸಚಿವರು ಒತ್ತಿ ಹೇಳಿದರು.

ಭದ್ರತಾ ಏಜೆನ್ಸಿಗಳ ನಡುವೆ ತಡೆರಹಿತ ಸಮನ್ವಯ, ದುರ್ಬಲ ಪ್ರದೇಶಗಳನ್ನು ಗುರುತಿಸುವುದು ಮತ್ತು ಅಂತಹ ಪ್ರದೇಶಗಳ ಭದ್ರತಾ ಕಳವಳಗಳನ್ನು ಪರಿಹರಿಸುವ ಬಗ್ಗೆ ಶ್ರೀ ಅಮಿತ್ ಶಾ ಅವರು ಒತ್ತು ನೀಡಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಪುನರುಚ್ಚರಿಸಿದ ಗೃಹ ಸಚಿವರು, ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯಲು ಸರ್ಕಾರವು ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಹೇಳಿದರು.

ಭಾರತ ಸರ್ಕಾರದ ಕ್ರಮಗಳು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಗಣನೀಯ ಇಳಿಕೆಯೊಂದಿಗೆ ಉತ್ತಮ ಧನಾತ್ಮಕ ಫಲಿತಾಂಶಗಳನ್ನು ನೀಡಿವೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ಕಾಶ್ಮೀರ ಕಣಿವೆಗೆ ದಾಖಲೆ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದುಬರುತ್ತಿರುವುದು ಕಾನೂನು ಮತ್ತು ಸುವ್ಯವಸ್ಥೆಯ ಸುಧಾರಣೆಯನ್ನು ಪ್ರತಿಫಲಿಸುತ್ತದೆ ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನಕ್ಕೆ ಸಾಕ್ಷಿಯಾದ ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಭದ್ರತಾ ಸಂಸ್ಥೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಆಡಳಿತದ ಬಗ್ಗೆ ಶ್ರೀ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದರು.
*****
(Release ID: 2025805)