ಪ್ರಧಾನ ಮಂತ್ರಿಯವರ ಕಛೇರಿ

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ


ಪಿ ಎಂ ಎನ್ಆ ರ್ ಎಫ್ ನಿಂದ ಪರಿಹಾರ ಘೋಷಣೆ 

Posted On: 17 JUN 2024 12:58PM by PIB Bengaluru

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಪಘಾತ ಸ್ಥಳಕ್ಕೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಧಾವಿಸುತ್ತಿದ್ದು, ಸಂತ್ರಸ್ತರಿಗೆ ಸಹಾಯ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(PMNRF)ಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು:

“ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲ್ವೆ ಅಪಘಾತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು  ಪ್ರಾರ್ಥಿಸುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ವಿವರ ಪಡೆದಿದ್ದೇನೆ. ಸಂತ್ರಸ್ತರ ನೆರವಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ಹೋಗುತ್ತಿದ್ದಾರೆ.'' ಎಂದು ಹೇಳಿದ್ದಾರೆ. 
 

ಪ್ರಧಾನ ಮಂತ್ರಿಗಳ ಕಾರ್ಯಾಲಯವು  ಎಕ್ಸ್ ಪೋಸ್ಟ್ ನಲ್ಲಿ:

“ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲ್ವೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಚಿಕಿತ್ಸೆಗೆ ತಲಾ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ." ಎಂದು ತಿಳಿಸಿದೆ. 

 

 

*****



(Release ID: 2025896) Visitor Counter : 25