ಪ್ರಧಾನ ಮಂತ್ರಿಯವರ ಕಛೇರಿ

ಉಸ್ತ್ರಾಸನದ ವಿಡಿಯೊ ಹಂಚಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

Posted On: 18 JUN 2024 10:29AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಸ್ತ್ರಾಸನ ಅಥವಾ ಒಂಟೆ ಭಂಗಿಯ ಬಗ್ಗೆ ವಿಡಿಯೊ ಕ್ಲಿಪ್ (ತುಣಕು) ಅನ್ನು ಹಂಚಿಕೊಂಡಿದ್ದಾರೆ, ಇದು ಬೆನ್ನು ಮತ್ತು ಕುತ್ತಿಗೆಯ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ರಕ್ತ ಪರಿಚಲನೆ ಮತ್ತು ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ 10ನೇ ಆವೃತ್ತಿಗೆ ಮುಂಚಿತವಾಗಿ ಹಂಚಿಕೊಳ್ಳಲಾದ ಈ ಕ್ಲಿಪ್ ಇಂಗ್ಲಿಷ್ ಮತ್ತು ಹಿಂದಿ ಎರಡರಲ್ಲೂ ಭಂಗಿಯನ್ನು ಪ್ರದರ್ಶಿಸುವ ಹಂತಗಳನ್ನು ಸಹ ವಿವರಿಸುತ್ತದೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಉಸ್ತ್ರಾಸನವು ಬೆನ್ನು ಮತ್ತು ಕುತ್ತಿಗೆಯ ಸ್ನಾಯುಗಳನ್ನು ಬಲಪಡಿಸುತ್ತದೆ. ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಮತ್ತು ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ,’’.

 

 

 

*****



(Release ID: 2026345) Visitor Counter : 18