ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಶಾಂಕಾಸನ ಕುರಿತಾದ ವಿಡಿಯೋವನ್ನು ಹಂಚಿಕೊಂಡ ಪ್ರಧಾನಮಂತ್ರಿ

Posted On: 19 JUN 2024 8:36AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಲಬದ್ಧತೆ ನಿವಾರಣೆಗೆ ಸಹಾಯ ಮಾಡುವ ಹಾಗೂ ಜೀರ್ಣಕಾರಿ ಪ್ರಕ್ರಿಯೆಯನ್ನು ಸುಧಾರಿಸುವ ಶಶಾಂಕಾಸನ (ಮೊಲದ ಭಂಗಿ) ಕುರಿತಾದ ವಿಡಿಯೋದ ತುಣುಕೊಂದನ್ನು ಹಂಚಿಕೊಂಡಿದ್ದಾರೆ. ಈ ಆಸನವು ಬೆನ್ನುನೋವಿನ ನಿವಾರಣೆಗೆ ಸಹಕಾರಿಯಾಗಿದೆ. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಈ ಆಸನವನ್ನು ಮಾಡುವಾಗ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಅಂತಾರಾಷ್ಟ್ರೀಯ ಯೋಗ ದಿನದ ದಶಕಾಚರಣೆಯ ಅಂಗವಾಗಿ ಹಂಚಿಕೊಳ್ಳಲಾದ ಈ ಕ್ಲಿಪ್ ಇಂಗ್ಲಿಷ್ ಮತ್ತು ಹಿಂದಿ ಎರಡೂ ಭಾಷೆಯಲ್ಲೂ ಶಶಾಂಕಾಸನ ಭಂಗಿಯನ್ನು ಹಂತ-ಹಂತವಾಗಿ ವಿವರಿಸುತ್ತದೆ.

ಪ್ರಧಾನಮಂತ್ರಿಯವರು Xನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಶಶಾಂಕಾಸನವನ್ನು ನಿಯಮಿತವಾಗಿ ಏಕೆ ಅಭ್ಯಾಸ ಮಾಡಬೇಕು ಎಂಬ ಅರಿವು ಇಲ್ಲಿದೆ, ಬನ್ನಿ ನೋಡೋಣ..."

 

 

*****

 


(Release ID: 2026613) Visitor Counter : 67