ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ
azadi ka amrit mahotsav

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ತ್ಯಾಗರಾಜ್ ಕ್ರೀಡಾಂಗಣದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ​​​​​​​ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದರು


ಅನೇಕ ದೇಶಗಳು ಯೋಗವನ್ನು ಅಳವಡಿಸಿಕೊಂಡಿವೆ ಮತ್ತು ಅದರ ಮಹತ್ವವನ್ನು ಅರಿತುಕೊಂಡಿವೆ: ಶ್ರೀ ಜೋಶಿ

ಜಾಗತಿಕ ವೇದಿಕೆಯಲ್ಲಿ ಯೋಗವನ್ನು ಜನಪ್ರಿಯಗೊಳಿಸುವಲ್ಲಿ ಪ್ರಧಾನಮಂತ್ರಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ: ಶ್ರೀ ಜೋಶಿ

प्रविष्टि तिथि: 21 JUN 2024 5:05PM by PIB Bengaluru

10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಇಂದು ತ್ಯಾಗರಾಜ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದ ನೇತೃತ್ವ ವಹಿಸಿದರು. ಕೇಂದ್ರ ಸಚಿವರು ಎಲ್ಲರಿಗೂ ಯೋಗ ದಿನದ ಶುಭಾಶಯಗಳನ್ನು ಕೋರಿದರು ಮತ್ತು ಆರೋಗ್ಯವಂತರಾಗಿರಲು ಭಾರತೀಯ ಯೋಗ ಪದ್ಧತಿಯನ್ನು ಅಳವಡಿಸಿಕೊಂಡಿದ್ದಕ್ಕಾಗಿ ಇಡೀ ರಾಷ್ಟ್ರವನ್ನು ಅಭಿನಂದಿಸಿದರು.


 

ಯೋಗಾಭ್ಯಾಸವನ್ನು ಪುನರುಜ್ಜೀವನಗೊಳಿಸುವಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪ್ರಯತ್ನಗಳನ್ನು ಶ್ರೀ ಜೋಶಿ ಶ್ಲಾಘಿಸಿದರು. ಪ್ರಧಾನಮಂತ್ರಿಯವರ ದಣಿವರಿಯದ ಪ್ರಯತ್ನಗಳು ಜನಸಾಮಾನ್ಯರಲ್ಲಿ ಯೋಗಾಭ್ಯಾಸದ ಆಸಕ್ತಿಯನ್ನು ಪುನರುಜ್ಜೀವನಗೊಳಿಸಿವೆ ಎಂದು ಹೇಳಿದರು. ಜಾಗತಿಕ ವೇದಿಕೆಯಲ್ಲಿ ಯೋಗವನ್ನು ಜನಪ್ರಿಯಗೊಳಿಸುವಲ್ಲಿ ಗೌರವಾನ್ವಿತ ಪ್ರಧಾನಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಇಂದು, ಅನೇಕ ದೇಶಗಳು ಯೋಗವನ್ನು ಅಳವಡಿಸಿಕೊಂಡಿವೆ ಮತ್ತು ಅದರ ಮಹತ್ವವನ್ನು ಚೆನ್ನಾಗಿ ಅರಿತುಕೊಂಡಿವೆ ಎಂದು ಸಚಿವರು ಹೇಳಿದರು. ಜೂನ್ 21 ಅನ್ನು ʻಅಂತರರಾಷ್ಟ್ರೀಯ ಯೋಗ ದಿನʼವೆಂದು ಗೊತ್ತುಪಡಿಸುವ  ನಿರ್ಣಯವನ್ನು ವಿಶ್ವಸಂಸ್ಥೆಯಲ್ಲಿ ಅಂಗೀಕರಿಸಲು ಸಹಾಯ ಮಾಡಿದ ದೇಶಗಳಿಗೆ ಅವರು ಧನ್ಯವಾದ ಅರ್ಪಿಸಿದರು. ವರ್ಷ ಪ್ರಧಾನಮಂತ್ರಿಯವರು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದರು ಎಂದು ಸಚಿವರು ಮಾಹಿತಿ ನೀಡಿದರು.

ಸಹಾಯಕ ಸಚಿವರಾದ ಶ್ರೀ ಬಿ.ಎಲ್. ವರ್ಮಾ ಅವರು ಸಹ ಈ ಮರುಚೈತನ್ಯಕಾರಿ ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ(ಡಿಎಫ್‌ಪಿಡಿ) ಕಾರ್ಯದರ್ಶಿ ಶ್ರೀ ಸಂಜೀವ್ ಚೋಪ್ರಾ, ಗ್ರಾಹಕ ವ್ಯವಹಾರಗಳ ಇಲಾಖೆ (ಡಿಒಸಿಎ) ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ(ಎಂಎನ್‌ಆರ್‌ಇ) ಕಾರ್ಯದರ್ಶಿ ಶ್ರೀ ಭೂಪಿಂದರ್ ಸಿಂಗ್ ಭಲ್ಲಾ ಉಪಸ್ಥಿತರಿದ್ದರು. ಮುಂಜಾನೆ ನಡೆದ ಯೋಗ ಅಧಿವೇಶನವು ಹೆಚ್ಚಿನ ಸಂಖ್ಯೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು.


ನವದೆಹಲಿಯ ʻಕಾನ್‌ಸ್ಟಿಟ್ಯೂಷನಲ್‌ ಕ್ಲಬ್ ಆಫ್ ಇಂಡಿಯಾʼದಲ್ಲಿ ಸಾಮೂಹಿಕ ಯೋಗ ಪ್ರದರ್ಶನದ ಎರಡನೇ ಅಧಿವೇಶನವೂ ನಡೆಯಿತು. ʻಡಿಎಫ್‌ಪಿಡಿʼ ಮತ್ತು ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. 'ಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ ವಿಷಯಾಧಾರಿತವಾಗಿ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.


*****


 


(रिलीज़ आईडी: 2027789) आगंतुक पटल : 65
इस विज्ञप्ति को इन भाषाओं में पढ़ें: English , Urdu , हिन्दी , Tamil