ವಾರ್ತಾ ಮತ್ತು ಪ್ರಸಾರ ಸಚಿವಾಲಯ
ಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ನವದೆಹಲಿಯ ಲೋಧಿ ಗಾರ್ಡನ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು
Posted On:
21 JUN 2024 6:38PM by PIB Bengaluru
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ನವದೆಹಲಿಯ ಲೋಧಿ ಗಾರ್ಡನ್‌ನಲ್ಲಿ 'ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ' ಎಂಬ ಧ್ಯೇಯವಾಕ್ಯದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ (IYD) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಯೋಗಾಭ್ಯಾಸದಲ್ಲಿ ಪಾಲ್ಗೊಂಡು ದೈಹಿಕ ಸ್ವಾಸ್ಥ್ಯ, ಮಾನಸಿಕ ಶಾಂತಿ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಸಾಧಿಸಲು ಯೋಗದ ಶಕ್ತಿಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಭಾರತದ ಯೋಗಾಭ್ಯಾಸವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಕೀರ್ತಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಸಚಿವರು ಹೇಳಿದರು. ಯೋಗಾಸಕ್ತರು ಇಂದು ಆರೋಗ್ಯದಲ್ಲಿ ಧನಾತ್ಮಕ ಬದಲಾವಣೆಗೆ ಕೊಡುಗೆ ನೀಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ತಮಿಳುನಾಡಿನ ನೀಲಗಿರಿ ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಪೆರಿಯನಾಯಕನ್ ಪಾಳಯಂ ಪ್ರದೇಶದಲ್ಲಿರುವ ರಾಮಕೃಷ್ಣ ಮಿಷನ್ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್. ಮುರುಗನ್ ಭಾಗವಹಿಸಿದ್ದರು. ರಾಮಕೃಷ್ಣ ಮಿಷನ್ ವಿದ್ಯಾಲಯ ಕಂಪನಿ ಕಾರ್ಯದರ್ಶಿ ಸ್ವಾಮಿ ಕರಿಷ್ಠಾನಂದ ಮಹಾರಾಜ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪತ್ರಿಕಾ ಮಾಹಿತಿ ಬ್ಯೂರೋ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನ ಮಹಾನಿರ್ದೇಶಕರಾದ ಶ್ರೀಮತಿ ಶೆಫಲಿ ಶರಣ್ ಅವರ ನೇತೃತ್ವದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಯೋಗ ಪ್ರದರ್ಶನ ನೀಡಿದರು.
*****
(Release ID: 2027898)
Visitor Counter : 53