ಪ್ರಧಾನ ಮಂತ್ರಿಯವರ ಕಛೇರಿ

ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಹುತಾತ್ಮ ದಿನದಂದು ಪ್ರಧಾನಮಂತ್ರಿ ಗೌರವ ನಮನ

Posted On: 23 JUN 2024 10:14AM by PIB Bengaluru

ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಹುತಾತ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗೌರವ ನಮನ ಸಲ್ಲಿಸಿದರು.

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಧೀಮಂತ ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿರಲಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ದೇಶದ ಮಹಾನ್ ಸುಪುತ್ರ, ಖ್ಯಾತ ಚಿಂತಕ ಮತ್ತು ಶಿಕ್ಷಣ ತಜ್ಞರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು.  ಭಾರತ ಮಾತೆಯ ಸೇವೆಗೆ ಅವರು ತಮ್ಮ ಜೀವನವನ್ನು ಸಮರ್ಪಿಸಿದ್ದರು. ಎಲ್ಲ ಪೀಳಿಗೆಗಳಿಗೂ ಅವರ ಪ್ರಭಾವಶಾಲಿ ವ್ಯಕ್ತಿತ್ವ ಪ್ರೇರಣಾದಾಯಕವಾಗಿರಲಿದೆ.”

 

 

*****



(Release ID: 2028132) Visitor Counter : 27