ಪ್ರಧಾನ ಮಂತ್ರಿಯವರ ಕಛೇರಿ
ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣವು ಪ್ರಗತಿ ಮತ್ತು ಉತ್ತಮ ಆಡಳಿತದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ: ಪ್ರಧಾನಮಂತ್ರಿ
प्रविष्टि तिथि:
27 JUN 2024 3:05PM by PIB Bengaluru
ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣವು ಸಮಗ್ರವಾಗಿ, ಪ್ರಗತಿ ಮತ್ತು ಉತ್ತಮ ಆಡಳಿತದ ಮಾರ್ಗಸೂಚಿಯನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ. ಶ್ರೀ ಮೋದಿಯವರು ರಾಷ್ಟ್ರಪತಿಯವರ ಭಾಷಣದ ಲಿಂಕ್ ಅನ್ನು ಸಹ ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣವು ಸಮಗ್ರವಾಗಿದೆ. ಇದು ಪ್ರಗತಿ ಮತ್ತು ಉತ್ತಮ ಆಡಳಿತದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ಇದು ಭಾರತವು ಸಾಧಿಸುತ್ತಿರುವ ಪ್ರಗತಿ ಮತ್ತು ನಮ್ಮ ಸಾಮರ್ಥ್ಯವನ್ನು ಬಿಂಬಿಸುತ್ತದೆ. ನಮ್ಮ ಜೀವನದಲ್ಲಿ ಗುಣಾತ್ಮಕ ಬದಲಾವಣೆಯನ್ನು ತರಲು, ನಾವು ಸಾಮೂಹಿಕವಾಗಿ ಜಯಿಸಬೇಕಾದ ಕೆಲವು ಪ್ರಮುಖ ಸವಾಲುಗಳನ್ನು ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ" ಎಂದು ಹೇಳಿದ್ದಾರೆ.
https://pib.gov.in/PressReleasePage.aspx?PRID=2028958
*****
(रिलीज़ आईडी: 2029293)
आगंतुक पटल : 76
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Hindi_MP
,
Bengali
,
Manipuri
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam