ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಧಿಕಾರ ವಹಿಸಿಕೊಂಡ ನೆದರ್ಲ್ಯಾಂಡ್ ಪ್ರಧಾನ ಮಂತ್ರಿಗೆ ಪ್ರಧಾನಿ ಮೋದಿ ಅಭಿನಂದನೆ 

प्रविष्टि तिथि: 02 JUL 2024 8:22PM by PIB Bengaluru

ನೆದರ್ಲ್ಯಾಂಡ್ ನ ನೂತನ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕ್ ಸ್ಕೂಫ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. 

ನವೀಕರಿಸಬಹುದಾದ ಇಂಧನ, ಜಲ ನಿರ್ವಹಣೆ, ಕೃಷಿ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಭಾರತ-ನೆದರ್‌ಲ್ಯಾಂಡ್ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ಎದುರು ನೋಡುತ್ತಿದ್ದೇನೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು:

"ನೆದರ್‌ಲ್ಯಾಂಡ್‌ನ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿಕ್ ಸ್ಕೂಫ್ ಅವರಿಗೆ ಅಭಿನಂದನೆಗಳು. ನವೀಕರಿಸಬಹುದಾದ ಇಂಧನ, ಜಲ ನಿರ್ವಹಣೆ, ಕೃಷಿ, ಚಲನಶೀಲತೆ, ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ-ನೆದರ್‌ಲ್ಯಾಂಡ್‌ನ ಪಾಲುದಾರಿಕೆಯನ್ನು ಮುನ್ನಡೆಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ" @MinPres ಎಂದು ಹೇಳಿದ್ದಾರೆ.

 

 

*****


(रिलीज़ आईडी: 2030557) आगंतुक पटल : 103
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Manipuri , Bengali , Assamese , Punjabi , Gujarati , Odia , Tamil , Telugu , Malayalam