ರೈಲ್ವೇ ಸಚಿವಾಲಯ
"ಬಡವರು, ಕೆಳ ಮಧ್ಯಮ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ಭಾರತೀಯ ರೈಲ್ವೆ ಬದ್ಧವಾಗಿದೆ": ಅಶ್ವಿನಿ ವೈಷ್ಣವ್
ಸಂಪೂರ್ಣ ಸಮರ್ಪಣಾ ಭಾವದಿಂದ ಕೆಲಸ ಮಾಡಲು ಮತ್ತು ರೈಲ್ವೆಯಲ್ಲಿ ಜನರ ನಂಬಿಕೆ ಸ್ಥಿರವಾಗಿರುವಂತೆ ನೋಡಿಕೊಳ್ಳಲು ರೈಲ್ವೆ ಸಿಬ್ಬಂದಿಗೆ ಅಶ್ವಿನಿ ವೈಷ್ಣವ್ ಮನವಿ
प्रविष्टि तिथि:
05 JUL 2024 6:01PM by PIB Bengaluru
ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ರೈಲ್ ಭವನದಲ್ಲಿ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಡ, ಕೆಳ ಮಧ್ಯಮ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ರೈಲು ಪ್ರಯಾಣವನ್ನು ಒದಗಿಸಲು ಭಾರತೀಯ ರೈಲ್ವೆ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಮುಂದಿನ ಎರಡು ವರ್ಷಗಳಲ್ಲಿ 10,000 ನಾನ್ ಎಸಿ ಕೋಚ್‌ಗಳನ್ನು ತಯಾರಿಸಲು ರೈಲ್ವೆ ಇಲಾಖೆ ಬದ್ಧವಾಗಿದೆ ಎಂದು ಅವರು ಹೇಳಿದರು.

ಶ್ರೀ ಅಶ್ವಿನಿ ವೈಷ್ಣವ್ ಅವರು ದೇಶಾದ್ಯಂತ 12 ಲಕ್ಷ ರೈಲ್ವೆ ಸಿಬ್ಬಂದಿಗೆ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಲು ಮತ್ತು ಅವರ ನೈತಿಕತೆಯನ್ನು ಉನ್ನತ ಮಟ್ಟದಲ್ಲಿ ಇರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ರೈಲ್ವೆ ಸಿಬ್ಬಂದಿ ಸಾಮೂಹಿಕವಾಗಿ ಕೆಲಸ ಮಾಡಲು ಮತ್ತು ರೈಲ್ವೆ ಮೇಲೆ ಜನರ ನಂಬಿಕೆ ಸ್ಥಿರವಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
*****
(रिलीज़ आईडी: 2031161)
आगंतुक पटल : 157