ಪ್ರಧಾನ ಮಂತ್ರಿಯವರ ಕಛೇರಿ

ಉನ್ನಾವೋ ರಸ್ತೆ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ, ಪರಿಹಾರ ಘೋಷಣೆ

Posted On: 10 JUL 2024 10:45AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉನ್ನಾವೊ ರಸ್ತೆ ಅಪಘಾತದ ಬಗ್ಗೆ ಇಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ಒದಗಿಸುವಲ್ಲಿ ನಿರತವಾಗಿದೆ ಎಂದು ಪ್ರಧಾನ ಮಂತ್ರಿ ಭರವಸೆ ನೀಡಿದ್ದಾರೆ.

ಪ್ರಧಾನ ಮಂತ್ರಿಗಳ ಕಚೇರಿಯು(ಪಿಎಂಒ) ʻಎಕ್ಸ್‌ʼ ವೇದಿಕೆಯಲ್ಲಿ ಈ ಬಗ್ಗೆ ಹೀಗೆ ಪೋಸ್ಟ್ ಮಾಡಿದೆ:

"ಉತ್ತರ ಪ್ರದೇಶದ ಉನ್ನಾವೋದಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ. ಇದರೊಂದಿಗೆ ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ. ಮೇಲ್ವಿಚಾರಣೆಯಲ್ಲಿ. ರಾಜ್ಯ ಸರ್ಕಾರ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ: ಪ್ರಧಾನಿ @narendramodi.

 

ಉನ್ನಾವೊದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ʻಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿʼಯಿಂದ(ಪಿಎಂಎನ್‌ಆರ್‌ಎಫ್) 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನೂ ಶ್ರೀ ಮೋದಿ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿಗಳ ಕಚೇರಿಯು(ಪಿಎಂಒ) ಈ ಬಗ್ಗೆ ʻಎಕ್ಸ್‌ʼ ವೇದಿಕೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ:

"ಉನ್ನಾವೊದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು.

 

 

*****

 



(Release ID: 2032093) Visitor Counter : 22