ಪ್ರಧಾನ ಮಂತ್ರಿಯವರ ಕಛೇರಿ
ಡಾ. ಎಂ.ಎಸ್. ವಲಿಯಥಾನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
19 JUL 2024 8:48PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನಾ ಕ್ಷೇತ್ರದ ಪ್ರವರ್ತಕ ಡಾ. ಎಂ.ಎಸ್. ವಲಿಯಥಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನಾ ಕ್ಷೇತ್ರದ ಪ್ರವರ್ತಕ ಡಾ.ಎಂ.ಎಸ್.ವಲಿಯಥಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕೊಡುಗೆಗಳು ಅಳಿಸಲಾಗದ ಗುರುತನ್ನು ಬಿಟ್ಟಿವೆ ಮತ್ತು ಅಸಂಖ್ಯಾತ ಜನರಿಗೆ ಪ್ರಯೋಜನವನ್ನು ನೀಡಿವೆ. ವೆಚ್ಚ-ಪರಿಣಾಮಕಾರಿ ಮತ್ತು ಉನ್ನತ ಗುಣಮಟ್ಟದ ಆವಿಷ್ಕಾರಗಳಿಗಾಗಿ ಅವರನ್ನು ವಿಶೇಷವಾಗಿ ನೆನಪಿಸಿಕೊಳ್ಳಲಾಗುತ್ತದೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ಸುಧಾರಿಸುವಲ್ಲಿಯೂ ಅವರು ಮುಂಚೂಣಿಯಲ್ಲಿದ್ದರು. ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ," ಎಂದು ಹೇಳಿದ್ದಾರೆ.
*****
(Release ID: 2034629)
Visitor Counter : 40
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam