ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ


ಪುನರಾಯ್ಕೆಯಾದ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಲಕ್ಸನ್ ಅಭಿನಂದನೆ

ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜನರ ನಡುವಿನ ಸಂಬಂಧಗಳಲ್ಲಿ ಬೇರೂರಿರುವ ದ್ವಿಪಕ್ಷೀಯ ಸಂಬಂಧಗಳನ್ನು ಮುನ್ನಡೆಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು

ವ್ಯಾಪಾರ, ಪಶುಸಂಗೋಪನೆ, ಔಷಧ, ಶಿಕ್ಷಣ, ಬಾಹ್ಯಾಕಾಶ ಮತ್ತು ಇತರ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಅವರು ಸಮ್ಮತಿಸಿದರು

ಭಾರತೀಯ ವಲಸಿಗರ ಹಿತಾಸಕ್ತಿಗಳನ್ನು ನೋಡಿಕೊಂಡಿದ್ದಕ್ಕಾಗಿ ಪ್ರಧಾನಿ ಲಕ್ಸನ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು. ಅವರ ಭದ್ರತೆ ಮತ್ತು ಯೋಗಕ್ಷೇಮದ ಭರವಸೆ ನೀಡಿದ ಪ್ರಧಾನಿ ಲಕ್ಸನ್

Posted On: 20 JUL 2024 2:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ಪ್ರಧಾನಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಭಾರತದಲ್ಲಿ ಸಾರ್ವತ್ರಿಕ ಚುನಾವಣೆಯ ನಂತರ ಪುನರಾಯ್ಕೆಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಲಕ್ಸನ್ ಹಾರ್ದಿಕವಾಗಿ ಅಭಿನಂದಿಸಿದರು.

ಭಾರತ-ನ್ಯೂಜಿಲೆಂಡ್ ಸಂಬಂಧಗಳು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜನರ ನಡುವಿನ ನಿಕಟ ಸಂಬಂಧಗಳಲ್ಲಿ ನೆಲೆಗೊಂಡಿವೆ ಎಂದು ಗಮನಿಸಿದ ಇಬ್ಬರೂ ನಾಯಕರು, ಮುಂಬರುವ ವರ್ಷಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ದೃಢ ಬದ್ಧತೆಯನ್ನು ಪುನರುಚ್ಚರಿಸಿದರು.

ಎರಡೂ ಕಡೆಗಳ ನಡುವಿನ ಇತ್ತೀಚಿನ ಉನ್ನತ ಮಟ್ಟದ ಸಂಪರ್ಕಗಳಿಂದ ಉಂಟಾದ ಆವೇಗವನ್ನು ಬಿಂಬಿಸುವುದರ ಜತೆಗೆ ವ್ಯಾಪಾರ ಮತ್ತು ಆರ್ಥಿಕ ಸಹಕಾರ, ಪಶುಸಂಗೋಪನೆ, ಔಷಧೀಯ, ಶಿಕ್ಷಣ, ಬಾಹ್ಯಾಕಾಶ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಪ್ರಯೋಜನಕಾರಿ ದ್ವಿಪಕ್ಷೀಯ ಸಹಕಾರವನ್ನು ಮುಂದುವರಿಸಲು ಅವರು ಸಮ್ಮತಿಸಿದರು.

ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಹಿತಾಸಕ್ತಿಗಳನ್ನು ನೋಡಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಕ್ಸನ್ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಲಕ್ಸನ್ ಅವರ ಸುರಕ್ಷತೆ ಮತ್ತು ಯೋಗಕ್ಷೇಮದ ಕಡೆಗೆ ನಿರಂತರ ಪ್ರಯತ್ನಗಳ ಭರವಸೆಯನ್ನು ನೀಡಿದರು.

ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದರು.

 

*****


(Release ID: 2034777) Visitor Counter : 54