ಹಣಕಾಸು ಸಚಿವಾಲಯ
azadi ka amrit mahotsav

ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿ ಸುಧಾರಣೆಗಾಗಿ 'ಪ್ರಧಾನ ಮಂತ್ರಿ  ಜನಜಾತೀಯ ಉನ್ನತ್ ಗ್ರಾಮ ಅಭಿಯಾನ'ವನ್ನು ಘೋಷಿಸಿದ ಕೇಂದ್ರ ಹಣಕಾಸು ಸಚಿವರು


ಈ ಯೋಜನೆಯು ಬುಡಕಟ್ಟು ಪ್ರಾಬಲ್ಯದ  ಗ್ರಾಮಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಬುಡಕಟ್ಟು ಕುಟುಂಬಗಳಿಗೆ ಸ್ಯಾಚುರೇಶನ್ ವ್ಯಾಪ್ತಿಯನ್ನು ಅಳವಡಿಸಿಕೊಳ್ಳುತ್ತದೆ

5 ಕೋಟಿ ಬುಡಕಟ್ಟು ಜನರಿಗೆ ಪ್ರಯೋಜನವಾಗುವ ಗುರಿಯೊಂದಿಗೆ 63,000 ಗ್ರಾಮಗಳನ್ನು ಇದರ ವ್ಯಾಪ್ತಿಗೆ ತರಲಾಗುವುದು

Posted On: 23 JUL 2024 12:48PM by PIB Bengaluru

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುವಾಗ ಪ್ರಧಾನ ಮಂತ್ರಿ ಜನಜಾತೀಯ ಉನ್ನತ್ ಗ್ರಾಮ ಅಭಿಯಾನವನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ಘೋಷಿಸಿದರು.

ಅಭಿಯಾನವು ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ತರುತ್ತದೆ ಎಂದು ಕೇಂದ್ರ ಹಣಕಾಸು ಸಚಿವರು ವಿವರಿಸಿದರು. ಎಲ್ಲರನ್ನೂ ಒಳಗೊಳ್ಳುವ ಅಂತರ್ಗತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಒಟ್ಟಾರೆ 'ಸ್ಯಾಚುರೇಶನ್ ಅಪ್ರೋಚ್' ಅಳವಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ ಅವರು, ಈ ಯೋಜನೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಬುಡಕಟ್ಟು ಕುಟುಂಬಗಳಿಗೆ ಸ್ಯಾಚುರೇಶನ್ ವ್ಯಾಪ್ತಿಯನ್ನು ಅಳವಡಿಸಿಕೊಳ್ಳುತ್ತದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ಜನಜಾತೀಯ ಉನ್ನತ್ ಗ್ರಾಮ ಅಭಿಯಾನವು 63,000 ಗ್ರಾಮಗಳನ್ನು ಒಳಗೊಳ್ಳಲು ಉದ್ದೇಶಿಸಿದೆ ಮತ್ತು ದೇಶಾದ್ಯಂತ 5 ಕೋಟಿ ಬುಡಕಟ್ಟು ಜನರಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.

 

*****

 


(Release ID: 2036776) Visitor Counter : 93