ಪ್ರಧಾನ ಮಂತ್ರಿಯವರ ಕಛೇರಿ
ಲೋಕಮಾನ್ಯ ತಿಲಕ್ ಅವರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
प्रविष्टि तिथि:
23 JUL 2024 9:57AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಕಳೆದ ವರ್ಷ ಪುಣೆಯಲ್ಲಿ ನಡೆದ ಕಾರ್ಯಕ್ರಮದಿಂದ ತಮ್ಮ ಭಾಷಣವನ್ನು ಹಂಚಿಕೊಂಡರು, ಅಲ್ಲಿ ಅವರು ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವ ಗೌರವವನ್ನು ತಮ್ಮದಾಗಿಸಿಕೊಂಡರು.
ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
"ಲೋಕಮಾನ್ಯ ತಿಲಕ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನಗಳು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರನ್ನು ಯಾವಾಗಲೂ ಉನ್ನತ ವ್ಯಕ್ತಿಯಾಗಿ ನೆನಪಿಸಿಕೊಳ್ಳಲಾಗುತ್ತದೆ. ಅವರು ದೂರದೃಷ್ಟಿಯುಳ್ಳವರಾಗಿದ್ದರು, ಅವರು ರಾಷ್ಟ್ರೀಯತೆಯ ಮನೋಭಾವವನ್ನು ಬೆಳಗಿಸಲು ದಣಿವರಿಯದೆ ಕೆಲಸ ಮಾಡಿದರು ಮತ್ತು ಅದೇ ಸಮಯದಲ್ಲಿ ಶಿಕ್ಷಣ ಮತ್ತು ಸೇವೆಗೆ ಒತ್ತು ನೀಡಿದರು. ಕಳೆದ ವರ್ಷ ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವ ಗೌರವ ದೊರೆತ ನನ್ನ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ,’’ ಎಂದು ಹೇಳಿದ್ದಾರೆ.
*****
(रिलीज़ आईडी: 2037362)
आगंतुक पटल : 101
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Hindi_MP
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam