ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ

Posted On: 25 JUL 2024 8:41PM by PIB Bengaluru

ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್ ಡಿ ದೇವೇಗೌಡ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. 

ಭೇಟಿ ಸಂದರ್ಭದ ಫೋಟೋಗಳನ್ನು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,

“ಮಾಜಿ ಪ್ರಧಾನಿ ಶ್ರೀ ಹೆಚ್.ಡಿ.ದೇವೇಗೌಡ ಅವರನ್ನು 7, ಲೋಕ ಕಲ್ಯಾಣ ಮಾರ್ಗ ನಿವಾಸದಲ್ಲಿ ಭೇಟಿ ಮಾಡಿರುವುದು ಅತ್ಯಂತ ಗೌರವದ ಸಂಗತಿಯಾಗಿದೆ. ಹಲವು ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ದೃಷ್ಟಿಕೋನವು ಆಳವಾಗಿದ್ದು, ಮೌಲ್ಯಯುತವಾಗಿದೆ. ಈ ಸಂದರ್ಭದಲ್ಲಿ ಅವರು ನನಗೆ ನೀಡಿದ ಕಲಾಕೃತಿ ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿಯ ಕಡೆಗೆ ಮನಸ್ಸನ್ನು ಒಂದು ಬಾರಿ ಕರೆದೊಯ್ದಿತು'' ಎಂದು ಬರೆದುಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ಅವರ ಪುತ್ರ ಕೇಂದ್ರ ಬೃಹತ್ ಕೈಗಾರಿಕೆ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಉಪಸ್ಥಿತರಿದ್ದರು.

 

 

*****


(Release ID: 2037510) Visitor Counter : 43