ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಗೆ ಕಂಚಿನ ಪದಕ ಪ್ರಧಾನ ಮಂತ್ರಿಗಳಿಂದ ಅಭಿನಂದನೆ

प्रविष्टि तिथि: 28 JUL 2024 4:31PM by PIB Bengaluru

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಮನು ಭಾಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು:

“ಐತಿಹಾಸಿಕ ಪದಕ! #ParisOlympics2024 ರಲ್ಲಿ ಭಾರತದ ಮೊದಲ ಪದಕ ಗೆದ್ದ @realmanubhaker! ಕಂಚಿನ ಪದಕ ಗೆದ್ದ ನಿಮಗೆ ಅಭಿನಂದನೆಗಳು. ಭಾರತಕ್ಕೆ ಶೂಟಿಂಗ್ ನಲ್ಲಿ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ನೀವು ಪಾತ್ರರಾಗಿರುವುದು ಇನ್ನಷ್ಟು ವಿಶೇಷವಾಗಿದೆ. ಅದ್ವಿತೀಯ ಸಾಧನೆ! #Cheer4Bharat" ಎಂದು ಖುಷಿ ಹಂಚಿಕೊಂಡಿದ್ದಾರೆ.

 

 

*****


(रिलीज़ आईडी: 2038182) आगंतुक पटल : 74
इस विज्ञप्ति को इन भाषाओं में पढ़ें: Odia , English , Urdu , हिन्दी , Hindi_MP , Marathi , Bengali , Manipuri , Assamese , Punjabi , Gujarati , Tamil , Telugu , Malayalam