ಪ್ರಧಾನ ಮಂತ್ರಿಯವರ ಕಛೇರಿ
ಕೇರಳದ ವಯನಾಡ್‌ನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಕೇರಳ ಮುಖ್ಯಮಂತ್ರಿಯೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವಿನ ಭರವಸೆ ನೀಡಿದ ಪ್ರಧಾನಮಂತ್ರಿ
ʻಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿʼಯಿಂದ ಪರಿಹಾರ ಘೋಷಣೆ
Posted On:
30 JUL 2024 10:28AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳದ ವಯನಾಡ್‌ನ ಕೆಲವು ಭಾಗಗಳಲ್ಲಿ ಸಂಭವಿಸಿದ ಭೂಕುಸಿತದಿಂದ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಅಲ್ಲಿನ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.
ʻಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿʼಯಿಂದ (ಪಿಎಂಎನ್ಆರ್‌ಎಫ್) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರು ʻಎಕ್ಸ್ʼ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ವಯನಾಡಿನ ಕೆಲವು ಭಾಗಗಳಲ್ಲಿ ಸಂಭವಿಸಿದ ಭೂಕುಸಿತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ @pinarayivijayan ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅಲ್ಲಿನ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದೇನೆ.
“വയനാടിൻ്റെ ചില ഭാഗങ്ങളിൽ ഉണ്ടായ ഉരുൾപൊട്ടലിൽ ദുഃഖമുണ്ട്. പ്രിയപ്പെട്ടവരെ നഷ്ടപ്പെട്ട എല്ലാവർക്കുമൊപ്പമാണ് എൻ്റെ ചിന്തകൾ. പരിക്കേറ്റവർക്കായി പ്രാർത്ഥിക്കുന്നു. ദുരിതബാധിതരെ സഹായിക്കുന്നതിനുള്ള രക്ഷാപ്രവർത്തനം ഇപ്പോൾ നടന്നുകൊണ്ടിരിക്കുകയാണ്. കേരള മുഖ്യമന്ത്രി ശ്രീ @pinarayivijayan നോട് സംസാരിക്കുകയും അവിടെ നിലവിലുള്ള സാഹചര്യത്തിൻ്റെ പശ്ചാത്തലത്തിൽ കേന്ദ്രത്തിൽ നിന്ന് സാധ്യമായ എല്ലാ സഹായവും ഉറപ്പുനൽകുകയും ചെയ്തു.”
ಪ್ರಧಾನ ಮಂತ್ರಿಗಳ ಕಚೇರಿ ಈ ಬಗ್ಗೆ ʻಎಕ್ಸ್ʼ ವೇದಿಕೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ವಯನಾಡಿನ ಕೆಲವು ಭಾಗಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು.”
*****
(Release ID: 2038923)
Visitor Counter : 59
Read this release in:
English
,
Urdu
,
Marathi
,
Hindi
,
Hindi_MP
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam