ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಮಾಜಿ ಕ್ರಿಕೆಟಿಗ ಮತ್ತು ಕೋಚ್ ಶ್ರೀ ಅಂಶುಮಾನ್ ಗಾಯಕ್ವಾಡ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ
Posted On:
31 JUL 2024 11:59PM by PIB Bengaluru
ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೋಚ್ ಶ್ರೀ ಅಂಶುಮಾನ್ ಗಾಯಕ್ವಾಡ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಂಶುಮಾನ್ ಗಾಯಕ್ವಾಡ್ ಅವರು ಭಾರತದ ಕ್ರಿಕೆಟ್ ಗೆ ನೀಡಿದ ಕೊಡುಗೆಯಿಂದ ಯಾವತ್ತಿಗೂ ನಮ್ಮ ಸ್ಮರಣೆಯಲ್ಲಿರುತ್ತಾರೆ. ಅವರು ಪ್ರತಿಭಾನ್ವಿತ ಆಟಗಾರ ಮತ್ತು ಅತ್ಯುತ್ತಮ ತರಬೇತುದಾರರಾಗಿದ್ದರು ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಗಳು;
“ ಭಾರತ ಕ್ರಿಕೆಟ್ ಕ್ರೀಡಾ ಕ್ಷೇತ್ರದಲ್ಲಿ ಶ್ರೀ ಅಂಶುಮಾನ್ ಅವರು ನೀಡಿರುವ ಕೊಡುಗೆಯಿಂದ ಅವರನ್ನು ಎಂದಿಗೂ ಸ್ಮರಿಸಲಾಗುವುದು. ಪ್ರತಿಭಾನ್ವಿತ ಆಟಗಾರರಾಗಿದ್ದ ಅವರು ಅತ್ಯುತ್ತಮ ತರಬೇತುದಾರರು ಕೂಡ ಆಗಿದ್ದರು. ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.” ಎಂದು ಬರೆದುಕೊಂಡಿದ್ದಾರೆ.
*****
(Release ID: 2040055)
Visitor Counter : 40
Read this release in:
English
,
Urdu
,
Marathi
,
Hindi
,
Hindi_MP
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam