ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರಪತಿ ಭವನದಲ್ಲಿ ರಾಜ್ಯಪಾಲರ ಸಮ್ಮೇಳನ: ಪ್ರಧಾನಮಂತ್ರಿ ಭಾಗಿ
Posted On:
02 AUG 2024 2:06PM by PIB Bengaluru
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಾಜ್ಯಪಾಲರ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದರು. ರಾಜ್ಯಪಾಲರು ಹೇಗೆ ಅಭಿವೃದ್ಧಿಗೆ ಉತ್ತೇಜನ ನೀಡಬಹುದು ಮತ್ತು ಸಮಾಜಕ್ಕೆ ಯಾವ ರೀತಿ ಸೇವೆ ಸಲ್ಲಿಸಬಹುದು ಎಂಬ ಚರ್ಚೆಗೆ ಇದು ಪ್ರಮುಖ ವೇದಿಕೆಯಾಗಿದೆ ಎಂದು ಪ್ರಧಾನ ಮಂತ್ರಿಗಳು ಹೇಳಿದರು.
ಸಮ್ಮೇಳನದ ಬಗ್ಗೆ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು;
“ಇಂದು ಬೆಳಗ್ಗೆ ರಾಜ್ಯಪಾಲರ ಸಮ್ಮೇಳನದಲ್ಲಿ ಭಾಗವಹಿಸಿದ್ದೆ. ರಾಜ್ಯಪಾಲರು ಹೇಗೆ ಅಭಿವೃದ್ಧಿಯನ್ನು ಉತ್ತೇಜಿಸಬಹುದು ಮತ್ತು ಸಮಾಜಕ್ಕೆ ಸೇವೆ ಸಲ್ಲಿಸಬಹುದು ಎಂಬುದನ್ನು ಚರ್ಚಿಸಲು ಇದೊಂದು ಮುಖ್ಯ ವೇದಿಕೆಯಾಗಿದೆ'' ಎಂದು ಬರೆದುಕೊಂಡಿದ್ದಾರೆ.
*****
(Release ID: 2040674)
Visitor Counter : 37
Read this release in:
Tamil
,
English
,
Urdu
,
Hindi
,
Hindi_MP
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Telugu
,
Malayalam