ಪ್ರಧಾನ ಮಂತ್ರಿಯವರ ಕಛೇರಿ
ಶಾಸ್ತ್ರೀಯ ನೃತ್ಯಗಾರ್ತಿ ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಪ್ರಧಾನಮಂತ್ರಿವರಿಂದ ಸಂತಾಪ
प्रविष्टि तिथि:
04 AUG 2024 2:14PM by PIB Bengaluru
ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ ಡಾ. ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಡಾ.ಕೃಷ್ಣಮೂರ್ತಿ ಅವರು ಭಾರತೀಯ ಪರಂಪರೆಯನ್ನು ಶ್ರೀಮಂತಗೊಳಿಸಲು ಮಹತ್ತರವಾಗಿ ಶ್ರಮಿಸಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ಡಾ. ಯಾಮಿನಿ ಕೃಷ್ಣಮೂರ್ತಿ ಅವರ ನಿಧನದಿಂದ ನೋವಾಗಿದೆ. ಭಾರತೀಯ ಶಾಸ್ತ್ರೀಯ ನೃತ್ಯಕ್ಕೆ ಅವರ ಶ್ರೇಷ್ಠತೆ ಮತ್ತು ಸಮರ್ಪಣೆಯು ಪೀಳಿಗೆಯ ಎಲ್ಲರಿಗೂ ಸ್ಫೂರ್ತಿ ನೀಡಿದೆ ಮತ್ತು ನಮ್ಮ ಸಾಂಸ್ಕೃತಿಕ ವಲಯದಲ್ಲಿ ಅಳಿಸಲಾಗದ ವಿಶೇಷ ಛಾಪು ಮೂಡಿಸಿದೆ. ನಮ್ಮ ಪರಂಪರೆಯನ್ನು ಶ್ರೀಮಂತಗೊಳಿಸಲು ಅವರು ಬಹಳಷ್ಟು ಶ್ರಮಿಸಿದ್ದಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ."
*****
(रिलीज़ आईडी: 2042072)
आगंतुक पटल : 81
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Hindi_MP
,
Marathi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam