ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ

ಕೇಂದ್ರ ಕಾರ್ಮಿಕ ಸೇವೆಗೆ ಹೊಸದಾಗಿ ಸೇರ್ಪಡೆಗೊಂಡ ಅಧಿಕಾರಿಗಳಿಗೆ ಡಾ. ಮನ್ಸುಖ್ ಮಾಂಡವಿಯಾ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರು


ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿ ಯುವ ಅಧಿಕಾರಿಗಳೋಂದಿಗೆ ತೊಡಗಿಸಿಕೊಳ್ಳಲು ಮತ್ತು ನೇಮಕಾತಿ ಪತ್ರಗಳನ್ನು ವಿತರಿಸಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಕೇಂದ್ರ ಸಚಿವರು ಕೃತಜ್ಞತೆ ಸಲ್ಲಿಸಿದರು

Posted On: 06 AUG 2024 7:33PM by PIB Bengaluru

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಸೇವೆಗೆ (ಸಿ ಎಲ್‌ ಎಸ್) ಹೊಸದಾಗಿ ಸೇರ್ಪಡೆಗೊಂಡ ಅಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಸಮಾರಂಭದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

ಡಾ. ಮಾಂಡವೀಯ ಅವರು ಮಾತನಾಡಿ, ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿ ಯುವ ಅಧಿಕಾರಿಗಳೊಂದಿಗೆ ತೊಡಗಿಸಿಕೊಳ್ಳಲು ಮತ್ತು ನೇಮಕಾತಿ ಪತ್ರಗಳನ್ನು ವಿತರಿಸಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

"ಕೆಲಸ ಮಾಡುವಾಗ ರಾಷ್ಟ್ರ ಮೊದಲು ಎಂಬುದನ್ನು ನಿಮ್ಮ ಮನಸ್ಸಿನಲ್ಲಿ ಇರಿಸಿ. ನಿಮ್ಮ ಕೆಲಸದ ಜೊತೆಗೆ ನೀವು ಬದ್ಧತೆಯನ್ನು ತೋರಿದರೆ, ಫಲಿತಾಂಶಗಳು ಖಂಡಿತವಾಗಿಯೂ ಸಿಗುತ್ತವೆ" ಎಂದು ಕೇಂದ್ರ ಸಚಿವರು ಹೇಳಿದರು.

 

ಕೈಗಾರಿಕಾ ವಿವಾದಗಳ ತಡೆಗಟ್ಟುವಿಕೆ ಮತ್ತು ಇತ್ಯರ್ಥದ ಮೂಲಕ ದೇಶದಲ್ಲಿ ಸಾಮರಸ್ಯದ ಕೈಗಾರಿಕಾ ಸಂಬಂಧಗಳನ್ನು ಕಾಪಾಡಿಕೊಳ್ಳುವ ನಿರ್ಣಾಯಕ ಅಗತ್ಯವನ್ನು ಕೇಂದ್ರ ಸಚಿವರು ಒತ್ತಿ ಹೇಳಿದರು. ಕೇಂದ್ರ ವಲಯದಲ್ಲಿ ವಿವಿಧ ಕಾರ್ಮಿಕ ಕಾನೂನುಗಳ ಅನುಷ್ಠಾನ ಮತ್ತು ಜಾರಿಗೆ ವ್ಯವಸ್ಥಿತವಾದ ವಿಧಾನದ ಪ್ರಾಮುಖ್ಯತೆಯನ್ನು ಅವರು ಹೇಳಿದರು. ಹೊಸದಾಗಿ ನೇಮಕಗೊಂಡ ಅಧಿಕಾರಿಗಳು ಈ ಕಾನೂನುಗಳಿಗೆ ಬದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ, ಇದರಿಂದಾಗಿ ರಾಷ್ಟ್ರದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಕಲ್ಯಾಣವನ್ನು ಕಾಪಾಡುತ್ತಾರೆ ಎಂದು ಅವರು ಹೇಳಿದರು.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಕಾರ್ಮಿಕ ಕಾನೂನುಗಳ ಅನುಷ್ಠಾನ ಮತ್ತು ಆಡಳಿತ ಮತ್ತು ಕಾರ್ಮಿಕರ ನಡುವೆ ಸಾಮರಸ್ಯದ ಕೈಗಾರಿಕಾ ಸಂಬಂಧವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. ಈ ತತ್ವಗಳನ್ನು ಎತ್ತಿಹಿಡಿಯುವಲ್ಲಿ ಮತ್ತು ಸ್ಥಿರ ಮತ್ತು ನ್ಯಾಯಯುತ ಕಾರ್ಮಿಕ ಪರಿಸರಕ್ಕೆ ಕೊಡುಗೆ ನೀಡುವಲ್ಲಿ ಸಿ ಎಲ್‌ ಎಸ್ ಅಧಿಕಾರಿಗಳ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.

 

*****



(Release ID: 2042423) Visitor Counter : 19