ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಶಾಸಕರಾದ ಶ್ರೀ ಅಮೃತ್ ಲಾಲ್ ಮೀನಾ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ

Posted On: 08 AUG 2024 9:46PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಜಸ್ಥಾನದ ಸಾಲುಂಬರ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಮೃತ್ ಲಾಲ್ ಮೀನಾ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ತಮ್ಮ ಪ್ರದೇಶದ ಅಭಿವೃದ್ಧಿ ಮತ್ತು ಸಾಂಸ್ಥಿಕ ಕಾರ್ಯಕ್ಕಾಗಿ ಅವರ ಬದ್ಧತೆಯನ್ನು ಪ್ರಧಾನಿಯವರು ಸ್ಮರಿಸಿದ್ದಾರೆ. 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು X ನಲ್ಲಿ ಪೋಸ್ಟ್ ಮಾಡಿ:  

"ಸಾಲುಂಬರ್ ನ ಬಿಜೆಪಿ ಶಾಸಕರಾದ ಅಮೃತ್ ಲಾಲ್ ಮೀನಾ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರು ಪಕ್ಷದ ಶ್ರದ್ಧೆಯ ಕಾರ್ಯಕರ್ತರಾಗಿದ್ದರು. ತಮ್ಮ ಪ್ರದೇಶದ ಅಭಿವೃದ್ಧಿಯ ಜೊತೆಗೆ, ಸಂಘಟನೆಯನ್ನು ಬಲಪಡಿಸುವಲ್ಲಿ ತಮ್ಮ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಭಗವಂತ ಅವರ ಅಗಲಿಕೆಯನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ!" ಎಂದು ಹೇಳಿಕೊಂಡಿದ್ದಾರೆ.

 

 

*****


(Release ID: 2043461) Visitor Counter : 60