ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗಗಳ ಸಂಸದರ ನಿಯೋಗ

Posted On: 09 AUG 2024 1:58PM by PIB Bengaluru

ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗಗಳ ಸಂಸದರ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಪ.ಜಾ ಮತ್ತು ಪ.ಪಂ ಸಮುದಾಯಗಳ ಕಲ್ಯಾಣ ಮತ್ತು ಸಬಲೀಕರಣಕ್ಕೆ ಸರ್ಕಾರದ ಬದ್ಧತೆ ಮತ್ತು ಸಂಕಲ್ಪವನ್ನು ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,

"ಇಂದು ಪ.ಜಾ ಮತ್ತು ಪ.ಪಂ ಸಂಸದರ ನಿಯೋಗ ನನ್ನನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಆ ಸಮುದಾಯಗಳ ಕಲ್ಯಾಣ ಮತ್ತು ಸಬಲೀಕರಣಕ್ಕೆ ನಮ್ಮ ಸರ್ಕಾರದ ಬದ್ಧತೆ ಮತ್ತು ಸಂಕಲ್ಪವನ್ನು ಪುನರುಚ್ಚರಿಸಿದ್ದೇನೆ" ಎಂದು ಬರೆದುಕೊಂಡಿದ್ದಾರೆ.

 

 

*****


(Release ID: 2043623) Visitor Counter : 55