ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಸರ್ವರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

ಪ್ರಕಟಣಾ ದಿನಾಂಕ: 09 AUG 2024 8:58AM by PIB Bengaluru

ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ನಡೆದ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಭಾರತ ಬಿಟ್ಟು ತೊಲಗಿ ಚಳವಳಿಯ ಕುರಿತ ದೃಶ್ಯದ ತುಣುಕನ್ನು ಕೂಡಾ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು  ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ;

"ಬಾಪುಜಿ ಅವರ ನಾಯಕತ್ವದಲ್ಲಿ ನಡೆದ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಪಾಲ್ಗೊಂಡ ಎಲ್ಲರಿಗೂ ಗೌರವ ನಮನಗಳು. ಇದು ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ನಿಜಕ್ಕೂ ಐತಿಹಾಸಿಕ ಕ್ಷಣವಾಗಿತ್ತು”.

 

 

*****


(ಪ್ರಕಟಣೆ ಐ.ಡಿ.: 2043634) ವಿಸಿಟರ್ ಕೌಂಟರ್ : 115