ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಟಿಮೋರ್-ಲೆಸ್ಟೆಯ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಪ್ರಶಸ್ತಿ ಗೌರವ ಪಡೆದಿರುವ ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೆಮ್ಮೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ
Posted On:
11 AUG 2024 11:07AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ಟಿಮೋರ್-ಲೆಸ್ಟೆ ನೀಡಿ ಗುರುತಿಸಿರುವ ಬಗ್ಗೆ ಟ್ವೀಟ್ ನಲ್ಲಿ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಪ್ರತಿಷ್ಠಿತ ಗೌರವವು ಭಾರತ ಮತ್ತು ಟಿಮೋರ್-ಲೆಸ್ಟೆ ನಡುವಿನ ಆಳವಾದ ಸಂಬಂಧ ಮತ್ತು ಪರಸ್ಪರ ಗೌರವವನ್ನು ಎತ್ತಿ ತೋರಿಸುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು,
"ರಾಷ್ಟ್ರಪತಿಯವರಿಗೆ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ಟಿಮೋರ್-ಲೆಸ್ಟೆ ನೀಡಿ ಗೌರವಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಇದು ನಮ್ಮ ಎರಡೂ ದೇಶಗಳ ನಡುವಿನ ಬಲವಾದ ಬಾಂಧವ್ಯ ಮತ್ತು ಪರಸ್ಪರ ಗೌರವವನ್ನು ಪ್ರತಿಬಿಂಬಿಸುತ್ತದೆ. ಇದು ಹಲವಾರು ವರ್ಷಗಳಿಂದ ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆಯ ಮಾನ್ಯತೆಯಾಗಿದೆ" ಎಂದು ಹೇಳಿದ್ದಾರೆ.
*****
(Release ID: 2044420)
Visitor Counter : 34
Read this release in:
Odia
,
English
,
Urdu
,
Hindi
,
Hindi_MP
,
Marathi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam