ಪ್ರಧಾನ ಮಂತ್ರಿಯವರ ಕಛೇರಿ
ಆನೆಗಳನ್ನು ರಕ್ಷಿಸಲು ಸಮುದಾಯಗಳು ಮಾಡುತ್ತಿರುವ ವ್ಯಾಪಕ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ಆನೆಗಳು ನಮ್ಮ ಸಂಸ್ಕೃತಿ ಮತ್ತು ಇತಿಹಾಸದೊಂದಿಗೆ ಸಂಬಂಧ ಹೊಂದಿವೆ: ಪ್ರಧಾನ ಮಂತ್ರಿ
Posted On:
12 AUG 2024 9:30AM by PIB Bengaluru
ವಿಶ್ವ ಆನೆ ದಿನದ ಸಂದರ್ಭದಲ್ಲಿ ಆನೆಗಳನ್ನು ರಕ್ಷಿಸಲು ಸಮುದಾಯಗಳು ಮಾಡುತ್ತಿರುವ ವ್ಯಾಪಕ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಆನೆಗಳು ಅಭಿವೃದ್ಧಿ ಹೊಂದಲು ಅನುಕೂಲಕರವಾದ ಆವಾಸಸ್ಥಾನವನ್ನು ಪಡೆಯಲು ಸಾಧ್ಯವಿರುವ ಎಲ್ಲವನ್ನೂ ಒದಗಿಸುವ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದರು.
ಆನೆಗಳ ಮೌಲ್ಯ ಮತ್ತು ನಮ್ಮ ಸಂಸ್ಕೃತಿ ಹಾಗೂ ಇತಿಹಾಸದಲ್ಲಿ ಅವುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವರಿಸಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಆನೆಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
“ವಿಶ್ವ ಆನೆ ದಿನವು ಆನೆಗಳನ್ನು ರಕ್ಷಿಸಲು ಸಮುದಾಯಗಳು ಮಾಡುವ ವ್ಯಾಪಕ ಪ್ರಯತ್ನಗಳನ್ನು ಪ್ರಶಂಸಿಸಲು ಒಂದು ಸಂದರ್ಭವಾಗಿದೆ. ಅದೇ ಸಮಯದಲ್ಲಿ, ಆನೆಗಳು ಅಭಿವೃದ್ಧಿ ಹೊಂದಲು ಅನುಕೂಲಕರವಾದ ಆವಾಸಸ್ಥಾನವನ್ನು ಹೊಂದಲು ಸಾಧ್ಯವಿರುವ ಎಲ್ಲವನ್ನೂ ಮಾಡುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ಭಾರತದಲ್ಲಿ ನಮಗೆ, ಆನೆಯು ನಮ್ಮ ಸಂಸ್ಕೃತಿ ಮತ್ತು ಇತಿಹಾಸಕ್ಕೂ ಅನನ್ಯ ಸಂಬಂಧ ಹೊಂದಿದೆ. ಮತ್ತು ಕಳೆದ ಕೆಲವು ವರ್ಷಗಳಿಂದ, ಭಾರತದಲ್ಲಿ ಆನೆಗಳ ಸಂಖ್ಯೆಯು ಹೆಚ್ಚುತ್ತಿದೆ ಎಂಬುದು ಸಂತೋಷದ ಸಂಗತಿ.
*****
(Release ID: 2044521)
Visitor Counter : 39
Read this release in:
English
,
Urdu
,
Marathi
,
Hindi
,
Hindi_MP
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam