ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಿಸ್ ಒಲಿಂಪಿಕ್ಸ್ 2024 ಮುಕ್ತಾಯ: ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 11 AUG 2024 11:40PM by PIB Bengaluru

ಫ್ರಾನ್ಸ್ ನ ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ 2024 ಮುಕ್ತಾಯಗೊಂಡಿದ್ದು, ಭಾರತೀಯ ಕ್ರೀಡಾ ತಂಡ ಹಾಕಿರುವ ಪ್ರಯತ್ನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 

ಭಾರತೀಯ ಕ್ರೀಡಾಪಟುಗಳನ್ನು ಹೀರೋಗಳೆಂದು ಕರೆದಿರುವ ಪ್ರಧಾನಿ ಮೋದಿ,  ಅವರ ಮುಂದಿನ ಪಯಣಕ್ಕೆ ಶುಭ ಹಾರೈಸಿದ್ದಾರೆ. 
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,

"ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯಗೊಂಡಿದ್ದು, ತಮ್ಮ ಕ್ರೀಡಾ ಪ್ರದರ್ಶನ ಮೆರೆದ ಭಾರತೀಯ ತಂಡದ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಎಲ್ಲಾ ಕ್ರೀಡಾಪಟುಗಳು ತಮ್ಮ ಶಕ್ತಿಮೀರಿ ಪ್ರಯತ್ನ ಮಾಡಿದ್ದಾರೆ. ಅವರ ಬಗ್ಗೆ ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆಯಿದೆ. ನಮ್ಮ ಕ್ರೀಡಾ ವೀರರಿಗೆ ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 2044539) ವಿಸಿಟರ್ ಕೌಂಟರ್ : 67