ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥೈಲ್ಯಾಂಡ್ ಪ್ರಧಾನಿಯಾಗಿ ಆಯ್ಕೆಯಾದ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾ ಅವರನ್ನು ಅಭಿನಂದಿಸಿದರು
ಪ್ರಕಟಣಾ ದಿನಾಂಕ:
18 AUG 2024 11:53AM by PIB Bengaluru
ಥೈಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ನಾಗರಿಕ, ಸಾಂಸ್ಕೃತಿಕ ಮತ್ತು ಜನರ ಮಧ್ಯೆ ಸಂಪರ್ಕ ಸಾಧಿಸುವ ಬಲವಾದ ಅಡಿಪಾಯವನ್ನು ಆಧರಿಸಿದ ಭಾರತ ಮತ್ತು ಥೈಲ್ಯಾಂಡ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿಯವರು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು:
“ಥಾಯ್ಲೆಂಡ್ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾರಿಗೆ ಅಭಿನಂದನೆಗಳು. ನಿಮ್ಮ ಆಡಳಿತಾವಧಿ ಯಶಸ್ಸು ಕಾಣಲಿ ಎಂದು ಆಶಿಸುತ್ತೇನೆ. ನಾಗರಿಕ, ಸಾಂಸ್ಕೃತಿಕ ಮತ್ತು ಜನರ ಮಧ್ಯೆ ಸಂಪರ್ಕ ಸಾಧಿಸುವ ಬಲವಾದ ಅಡಿಪಾಯವನ್ನು ಆಧರಿಸಿದ ಭಾರತ ಮತ್ತು ಥೈಲ್ಯಾಂಡ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ಕೆಲಸ ಮಾಡಲು ಎದುರುನೋಡುತ್ತಿದ್ದೇನೆ'' ಎಂದು ಬರೆದುಕೊಂಡಿದ್ದಾರೆ.
*****
(ಪ್ರಕಟಣೆ ಐ.ಡಿ.: 2046408)
ವಿಸಿಟರ್ ಕೌಂಟರ್ : 83
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Hindi_MP
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam