ಪ್ರಧಾನ ಮಂತ್ರಿಯವರ ಕಛೇರಿ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಿಂದ ಪ್ರಧಾನಮಂತ್ರಿಯವರಿಗೆ ದೂರವಾಣಿ ಕರೆ
ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ಭಾರತದ ಪ್ರಧಾನಮಂತ್ರಿ
ಹಿಂದೂಗಳು ಮತ್ತು ಇತರ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳಿಗೆ ಸುರಕ್ಷತೆ ಮತ್ತು ರಕ್ಷಣೆಯನ್ನು ನೀಡಲು ಮಧ್ಯಂತರ ಸರ್ಕಾರವನ್ನು ಒತ್ತಾಯಿಸಿದ ಪ್ರಧಾನಮಂತ್ರಿ
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಿದ ಪ್ರೊಫೆಸರ್ ಯೂನುಸ್
प्रविष्टि तिथि:
16 AUG 2024 4:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾದ ಪ್ರೊ. ಮೊಹಮ್ಮದ್ ಯೂನುಸ್ ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದರು.
ಪ್ರಜಾಪ್ರಭುತ್ವಯುಕ್ತ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶ ನಿರ್ಮಾಣಕ್ಕೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿಯವರು ಪುನರುಚ್ಚರಿಸಿದರು. ವಿವಿಧ ಅಭಿವೃದ್ಧಿ ಉಪಕ್ರಮಗಳ ಮೂಲಕ ಬಾಂಗ್ಲಾದೇಶದ ಜನರನ್ನು ಬೆಂಬಲಿಸಲು ಭಾರತವು ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಇತರ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ರಕ್ಷಣೆಯನ್ನು ಖಾತ್ರಿಪಡಿಸಲು ಪ್ರೊ. ಮೊಹಮ್ಮದ್ ಯೂನುಸ್ ಅವರನ್ನು ಪ್ರಧಾನಮಂತ್ರಿ ಮೊದಿಯವರು ಒತ್ತಾಯಿಸಿದರು.
ಇದಕ್ಕೆ ಪ್ರತಿಯಾಗಿ ಪ್ರೊಫೆಸರ್ ಯೂನುಸ್ ಅವರು ಮಧ್ಯಂತರ ಸರ್ಕಾರವು ಹಿಂದೂಗಳು ಮತ್ತು ಬಾಂಗ್ಲಾದೇಶದ ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡುತ್ತದೆ ಎಂಬ ಭರವಸೆಯನ್ನು ನೀಡಿದರು.
ಉಭಯ ನಾಯಕರು ತಮ್ಮ ರಾಷ್ಟ್ರೀಯ ಆದ್ಯತೆಗಳಿಗೆ ಅನುಗುಣವಾಗಿ ದ್ವಿಪಕ್ಷೀಯ ಸಂಬಂಧವನ್ನು ಮುಂದೊಯ್ಯುವ ಮಾರ್ಗಗಳ ಬಗ್ಗೆಯೂ ಚರ್ಚಿಸಿದರು.
*****
(रिलीज़ आईडी: 2046519)
आगंतुक पटल : 63
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam