ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ

प्रविष्टि तिथि: 19 AUG 2024 2:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ತ್ರಿಪುರಾದ ಅಭಿವೃದ್ಧಿಯಲ್ಲಿ ಮಹಾರಾಜರ ಅಳಿಸಲಾಗದ ಪಾತ್ರವನ್ನು ಅವರು ಶ್ಲಾಘಿಸಿದರು. ತ್ರಿಪುರಾದ ಪ್ರಗತಿಗಾಗಿ ಮಹಾರಾಜರ ದೃಷ್ಟಿಕೋನವನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಭರವಸೆ ನೀಡಿದರು.
 ಈ ಸಂಬಂಧ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ:

"ಮಹಾನ್ ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ತ್ರಿಪುರಾದ ಅಭಿವೃದ್ಧಿಯಲ್ಲಿ ಅವರು ಅಳಿಸಲಾಗದ ಪಾತ್ರ ವಹಿಸಿದ್ದಾರೆ. ಅವರು ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಅವರು ರೂಪಿಸಿದ ಕಲ್ಯಾಣ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಗೌರವಿಸಲಾಗುತ್ತದೆ. ತ್ರಿಪುರಾದ ಪ್ರಗತಿಗಾಗಿ ಅವರ ದೃಷ್ಟಿಕೋನವನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ," ಎಂದು ಹೇಳಿದರು.

 

 

*****


(रिलीज़ आईडी: 2046582) आगंतुक पटल : 79
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Manipuri , Bengali , Assamese , Punjabi , Gujarati , Odia , Tamil , Telugu , Malayalam